ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ವತಿಯಿಂದ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನ ಮತ್ತು ಮುಕ್ರಂಪಾಡಿ ಸುಭದ್ರ ಕಲಾ ಮಂದಿರದಲ್ಲಿ 5 ದಿನ ನಡೆಯುವ ರಾಜ್ಯ, ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಿಕ್ಷಣ ಶಿಬಿರವನ್ನು ಜು.16ರಂದು ಉದ್ಘಾಟಿಸಲಾಯಿತು.
ಬೆಂಗಳೂರಿನ ಶಿಕ್ಷಣ ಪ್ರಮುಖ್ ಭರತ್ ಅವರು ಯೋಗದ ಕುರಿತು ಮಾಹಿತಿ ನೀಡಿದರು. ನೇತ್ರಾವತಿ ವಲಯ ಸಂಚಾಲಕ ಅಶೋಕ್ ಅವರು ಅಧ್ಯಕ್ಷತೆ ವಹಿಸಿದ್ದರು.
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಮತ್ತು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಅಭ್ಯಾಗತರಾಗಿ ಭಾಗವಹಿಸಿದ್ದರು. ಅಶ್ವಿನಿ ಸ್ವಾಗತಿಸಿ, ಶುಭ ವಂದಿಸಿದರು. ರಂಜನಿ ಕಾರ್ಯಕ್ರಮ ನಿರೂಪಿಸಿದರು.