ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಜು.16 ರಂದು ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ ನಡೆಯಿತು.


ಕ್ಷೇತ್ರದ ಪ್ರಧಾನ ಅರ್ಚಕರಾದ ಕುಂಡ ಮೊಗೇರ ಮಣ್ಣಾಪು, ಅಣ್ಣು ಮಣ್ಣಾಪು, ರವಿ ಮಣ್ಣಾಪು, ಮಧ್ಯಸ್ಥರಾದ ಗಣೇಶ್ ಪೂಜಾರಿ ಕೆಮ್ಮಿಂಜೆರವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ವಿಶ್ವನಾಥ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ, ಗೌರವ ಸಲಹೆಗಾರ ವಿಶ್ವನಾಥ ನಾಯ್ಕ ಅಮ್ಮುಂಜ, ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಿತ ನೂರಾರು ಭಕ್ತರು ಧಾರ್ಮಿಕ ವಿಧಿವಿಧಾನದಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ(ಅಗೇಲು ಬಾಬ್ತು ರೂ.1200/-) ನಡೆಯಲಿದ್ದು, ಆದಿತ್ಯವಾರ, ಮಂಗಳವಾರ, ಶುಕ್ರವಾರ ಭಕ್ತಾಧಿಗಳಿಗೆ ಪ್ರಾರ್ಥನೆ ಸಲ್ಲಿಸಲು ಶ್ರೀ ಕ್ಷೇತ್ರದಲ್ಲಿ ಅವಕಾಶವಿದೆ. ಅಗೇಲು ಸೇವೆ ನೀಡುವ ಭಕ್ತಾಧಿಗಳು ಎರಡು ದಿನ ಮುಂಚಿತವಾಗಿ ತಿಳಿಸತಕ್ಕದ್ದು.
ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರ ಮಣ್ಣಾಪು ಆಡಳಿತ ಸಮಿತಿ(ಮೊ:7760580714, 9901636848, 7349237945, 9591306593)ಯನ್ನು ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಸಮಯದಲ್ಲಿ ಬದಲಾವಣೆ..
-ಸಂಜೆ 6 ರಿಂದ 7-ಭಜನೆ
-7.30:ಪ್ರಾರ್ಥನೆ
-8.00:ಅಗೇಲು ಸೇವೆ
-9.00:ಅನ್ನಪ್ರಸಾದ