ಪುತ್ತೂರು: ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ನಾಲ್ಕರ ರೋಟರಿ ಕ್ಲಬ್ ಉಪ್ಪಿನಂಗಡಿ ಇದರ 2025-26ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಜೋನ್ ಕೆನ್ಯೂಟ್ ಮಸ್ಕರೇನ್ಹಸ್, ಕಾರ್ಯದರ್ಶಿಯಾಗಿ ಶ್ರೀಕಾಂತ್ ಪಟೇಲ್, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಯೂನಿಕ್ ರವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕೇಶವ ಪಿ.ಎಂ, ಸಾರ್ಜಂಟ್ ಎಟ್ ಆಮ್ಸ್೯ ರಾಜೇಶ್ ದಿಂಡಿಗಲ್, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಆಶಾಲತಾ, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಲವೀನಾ ಪಿಂಟೊ, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಜಗದೀಶ್ ನಾಯಕ್, ಇಂಟರ್ನ್ಯಾಷನಲ್ ಸರ್ವಿಸ್ ನಿರ್ದೇಶಕರಾಗಿ ನೀರಜ್ ಕುಮಾರ್ ಎ, ಯೂತ್ ಸರ್ವಿಸ್ ನಿರ್ದೇಶಕರಾಗಿ ಅರುಣ್ ಬಿ.ಕೆ, ಚೇರ್ಮನ್ ಗಳಾಗಿ ಅನುರಾಧಾ ಆರ್ ಶೆಟ್ಟಿ(ಮೆಂಬರ್ ಶಿಪ್), ಸ್ವರ್ಣೇಶ್ ಗಾಣಿಗ(ಟಿ.ಆರ್.ಎಫ್), ಸ್ವರ್ಣ ಪೊಸವಳಿಕೆ(ಪಬ್ಲಿಕ್ ಇಮೇಜ್), ರಾಜಶೇಖರ್ ಶೆಟ್ಟಿ(ಜಿಲ್ಲಾ ಪ್ರಾಜೆಕ್ಟ್), ವಂದನಾ ಮುದಲಾಜೆ(ಪಲ್ಸ್ ಪೋಲಿಯೊ), ಇಸ್ಮಾಯಿಲ್ ಇಕ್ಬಾಲ್(ವೆಬ್, ಡಿಜಿಟಲ್) ರವರು ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರ ಪರಿಚಯ:
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೋನ್ ಕೆನ್ಯೂಟ್ ಮಸ್ಕರೇನ್ಹಸ್ ರವರು ನೆಕ್ಕಿಲಾಡಿ ನಿವಾಸಿಯಾಗಿದ್ದು 1995ರಲ್ಲಿ ಪವನ್ ಫರ್ನಿಚರ್ಸ್ ಎಂಬ ಸಂಸ್ಥೆಯನ್ನು ತೆರೆದು ವ್ಯವಹಾರಕ್ಕಿಳಿದು ಬಳಿಕ 2006 ರಲ್ಲಿ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಪವನ್ ಎಂಟರ್ಪ್ರೈಸಸ್ ಲ್ಯಾಂಡ್ ಆಂಡ್ ವೆಹಿಕಲ್ ಫೀಲ್ಡ್ ಅನ್ನು ಆರಂಭಿಸಿದ್ದರು. ಕಳೆದ ಕೆಲವು ವರ್ಷಗಳಲ್ಲಿ ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದ ಚರ್ಚ್ ಪಾಲನಾ ಸಮಿತಿಯಲ್ಲಿ ಸದಸ್ಯರಾಗಿ, ಹತ್ತು ವರ್ಷ ಚರ್ಚ್ ನೆಕ್ಕಿಲಾಡಿ ವಾಳೆಯ ಗುರಿಕಾರರಾಗಿ, ದ.ಕ, ಮಂಗಳೂರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ, ಕ್ರಿಶ್ಚಿಯನ್ ಯೂನಿಯನ್ ಪುತ್ತೂರು ಇದರ ಉಪಾಧ್ಯಕ್ಷರಾಗಿ, ನೆಕ್ಕಿಲಾಡಿ ಸರಕಾರಿ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ, ಯುಕೆಜಿಯ ಅಧ್ಯಕ್ಷರಾಗಿ, ಉಪ್ಪಿನಂಗಡಿ ಕಥೋಲಿಕ್ ಸೊಸೈಟಿಯ ನಿರ್ದೇಶಕರಾಗಿ, ಪುತ್ತೂರು ನಂದನ ಕಾರ್ಪೊರೇಷನ್ ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನೆಕ್ಕಿಲಾಡಿ ಹಾಗೂ ಶಾಂತಿನಗರ ಪರಿಸರದ ನೂರಾರು ಫಲಾನುಭವಿಗಳಿಗೆ ಕಿಟ್ ವಿತರಿಸಿದ್ದು ಮಾತ್ರವಲ್ಲ ಅನಾರೋಗ್ಯಕ್ಕೀಡಾದ ಹಲವಾರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಕಾರಣಕರ್ತರಾಗಿದ್ದಾರೆ.
ನೂತನ ಕಾರ್ಯದರ್ಶಿ/ಕೋಶಾಧಿಕಾರಿ ಪರಿಚಯ:
ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಕಾಂತ ಪಟೇಲ್ ರವರು ಮೂಲತಃ ಗುಜರಾತ್ ನಿವಾಸಿಯಾಗಿದ್ದು ಕಳೆದ ಹಲವು ವರ್ಷಗಳಿಂದ ಉಪ್ಪಿನಂಗಡಿಯಲ್ಲಿ ಬಾಲಾಜಿ ಮೊಬೈಲ್ಸ್ ಉದ್ಯಮವನ್ನು ನಡೆಸುತ್ತಿದ್ದಾರೆ. ನೂತನ ಕೋಶಾಧಿಕಾರಿಯಾಗಿ ಆಯ್ಕೆಯಾದ ಅಬ್ದುಲ್ ರಹಿಮಾನ್ ಯೂನಿಕ್ ರವರು ನೆಕ್ಕಿಲಾಡಿ ನಿವಾಸಿಯಾಗಿದ್ದು ನೆಕ್ಕಿಲಾಡಿಯಲ್ಲಿ ಯೂನಿಕ್ ಇಂಡಸ್ಟ್ರೀಸ್ ಎಂಬ ಉದ್ಯಮವನ್ನು ನಡೆಸುತ್ತಿದ್ದಾರೆ.
ಜು.19:ಪದ ಪ್ರದಾನ..
ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ಜು.19 ರಂದು ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದ ಸಭಾಂಗಣದಲ್ಲಿ ಸಂಜೆ ಜರಗಲಿದೆ. ಪದ ಪ್ರದಾನ ಅಧಿಕಾರಿಯಾಗಿ ಜಿಲ್ಲಾ ಗವರ್ನರ್ ನಾಮಿನಿ ಯಶಸ್ವಿ ಎಸ್.ಸೋಮಶೇಖರ್ ರವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನವನ್ನು ನೆರವೇರಿಸಲಿದ್ದಾರೆ. ಗೌರವ ಅತಿಥಿಗಳಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ಹಾಗೂ ರೋಟರಿ ಕ್ಲಬ್ ಉಪ್ಪಿನಂಗಡಿ ಮಾಜಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ವಲಯ ಸೇನಾನಿ ಹರೀಶ್ ಸಿ.ಎಚ್, ಮಾತೃಸಂಸ್ಥೆ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ, ಮೇಜರ್ ಡೋನರ್ ಡಾ.ಶ್ರೀಪ್ರಕಾಶ್ ಬಿ.ರವರು ಭಾಗವಹಿಸಲಿದ್ದಾರೆ.