ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಕೆಯ್ಯೂರು ಇದರ ಆಶ್ರಯದಲ್ಲಿ ಆ.8ರಂದು ಶ್ರೀ ಕ್ಷೇತ್ರ ಕೆಯ್ಯೂರಿನಲ್ಲಿ ನಡೆಯುವ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಜು.15ರಂದು ಬಿಡುಗೊಳಿಸಲಾಯಿತು. ಅರ್ಚಕ ಶ್ರೀನಿವಾಸ ಭಟ್‌ರವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ, ಮಾಜಿ ಮೊಕ್ತೇಸರರುಗಳಾದ ಮೋಹನ್ ರೈ ಓಲೆಮುಂಡೋವು, ಶಶಿಧರ ರಾವ್ ಬೊಳಿಕ್ಕಳ ಸೇರಿದಂತೆ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.
ಚಿತ್ರ: ಆಮಂತ್ರಣ ಪತ್ರಿಕೆ ಬಿಡುಗಡೆ
