ನೆಲ್ಯಾಡಿ : ಆನೆ ದಾಳಿಗೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ನಡೆದಿದೆ.
ಸೌತಡ್ಕ ಗೋ ಶಾಲೆ ಸಮೀಪದ ನಿವಾಸಿ ಬಾಲಕೃಷ್ಣ ಶೆಟ್ಟಿ (65 ವ) ಮೃತರು.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾವಣೆಗೊಂಡಿದ್ದಾರೆ.
ದಾಳಿ ಸ್ಥಳದಲ್ಲೇ ಬೀಡು ಬಿಟ್ಟಿರುವ ಆನೆ
ಬಾಲಕೃಷ್ಣ ಅವರನ್ನು ಕೊಂದ ಸ್ಥಳದಲ್ಲೇ ಎರಡು ಆನೆಗಳು ಬೀಡುಬಿಟ್ಟಿವೆ. ಸದ್ಯ ಆನೆಗಳು ಆಕ್ರೋಶದಲ್ಲಿದ್ದು, ಸ್ಥಳಕ್ಕೆ ಸಾರ್ವಜನಿಕರು ಹೋಗದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಬಂದೋಬಸ್ತ್ ಕೈಗೊಂಡಿದ್ದಾರೆ.
ಆನೆಗಳ ರಾತ್ರಿ ಸಂಚಾರ ಆರಂಭವಾಗುತ್ತದೆ. ಹೀಗಾಗಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಬೇಕಾಗುತ್ತದೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
