ತೆಕ್ಕಾರು: ಪತಿ-ಪತ್ನಿ ಜಗಳ : ಪತ್ನಿಯ ಕೊಲೆಯಲ್ಲಿ ಅಂತ್ಯ

0

ಉಪ್ಪಿನಂಗಡಿ: ಪತಿ ಪತ್ನಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ಜು.17 ರಂದು ನಡೆದಿದೆ.


ಝೀನತ್ ( 40) ಕೊಲೆಯಾದವರು. ಇವರನ್ನು ಪತಿ ರಫೀಕ್ ಚೂರಿಯಿಂದ ಇರಿದು ಕೊಲೆಗೈದಿದ್ದಾರೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ, ಬೆಳ್ತಂಗಡಿ, ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ವಾಸವಿದ್ದ ಝೀನತ್ (40) ರಫೀಕ್ ನೊಂದಿಗೆ ಸುಮಾರು 18 ವರ್ಷದ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುತ್ತಾರೆ. ಸದ್ರಿ ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿರುವುದಾಗಿದೆ. ಜು.17 ರಂದು ಬೆಳಿಗ್ಗೆ ಕೌಟುಂಬಿಕ ಕಲಹ ನಡೆದಾಗ ರಫೀಕ್ ತನ್ನ ಪತ್ನಿ ಝೀನತ್ ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿರುತ್ತಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: ಅ.ಕ್ರ 64/2025 ಕಲಂ: 103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here