ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಪುತ್ತೂರು ಕ್ಷೇತ್ರ ಸಮಿತಿಯ ಮಹಾಸಭೆ, ಟೈಲರ್ ವೃತ್ತಿ ಬಾಂಧವರಿಗೆ ಸನ್ಮಾನ, ಟೈಲರ್ ವೃತ್ತಿ ಬಾಂಧವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಟೌನ್ಬ್ಯಾಂಕ್ ಸಭಾಂಗಣದಲ್ಲಿ ಜು.20ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕೆಎಸ್ಟಿಎ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷೆ ಉಮಾ ಯು ನಾೖಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಎಸ್ಟಿಎ ರಾಜ್ಯ ಸಮಿತಿ ಅಧ್ಯಕ್ಷ ನಾರಾಯಣ ಬಿ.ಎ, ಪ್ರಧಾನ ಕಾರ್ಯದರ್ಶಿ ಎ. ಪ್ರಜ್ವಲ್ ಕುಮಾರ್, ಕೆಎಸ್ಟಿಎ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲಿಯಾನ್, ಕೆಎಸ್ಟಿಎ ಜಿಲ್ಲಾ ಸಮಿತಿ ಅಧ್ಯಕ್ಷೆ ವಿದ್ಯಾ ಶೆಟ್ಟಿ, ಕೆಎಸ್ಟಿಎ ರಾಜ್ಯ ಸಮಿತಿ ಆಂತರಿಕ ಲೆಕ್ಕ ಪರಿಶೋಧಕ ರಘುನಾಥ್ ಬಿ, ಕೆಎಸ್ಟಿಎ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಎಸ್ಕೋಡಿ, ಕೆಎಸ್ಟಿಎ ಜಿಲ್ಲಾ ಸಮಿತಿ ಕೋಶಾಧಿಕಾರಿ ಚಕ್ರೇಶ್ ಅಮೀನ್, ಕೆಎಸ್ಟಿಎ ಮಾಜಿ ಜಿಲ್ಲಾಧ್ಯಕ್ಷ ಜಯಂತ ಉರ್ಲಾಂಡಿ, ಕೆಎಸ್ಟಿಎ ಜಿಲ್ಲಾ ಸಮಿತಿ ಉಪಾಧ್ಯಕ್ಷ ಶಂಭು ಬಲ್ಯಾಯ, ಕೆಎಸ್ಟಿಎ ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಜಯರಾಮ ಬಿ.ಎನ್, ಕೆಎಸ್ಟಿಎ ಜಿಲ್ಲಾ ಸಮಿತಿ ಜೊತೆ ಕಾರ್ಯದರ್ಶಿ ಸುರೇಖಾ ನಿಡ್ಪಳ್ಳಿ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಅಧ್ಯಕ್ಷೆ ಉಮಾ ಯು ನಾೖಕ್, ಕೋಶಾಧಿಕಾರಿ ಪರಮೇಶ್ವರ ಅನಿಲ, ಪ್ರಧಾನ ಕಾರ್ಯದರ್ಶಿ ಚಿತ್ರಾ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.