ಪುತ್ತೂರು: ಕೊಳ್ತಿಗೆ ಗ್ರಾಮದ ಕೊರ್ಬಂಡ್ಕಬೀಡು ಗಣೇಶ್ ರೈ (72ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಜು.17ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರಿ ನಯನಾ ರೈ, ಪುತ್ರ ರತನ್ ರೈ ಸೇರಿದಂತೆ ಮೂವರು ಸಹೋದರರು ಮತ್ತು ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
