ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಜು.19ರಂದು ʼವಿವೇಕ ಪ್ರದೀಪ್ತಿ-2025ʼ ಶೀರ್ಷಿಕೆಯಡಿ 2024-25ನೇ ಶೈಕ್ಷಣಿಕ ಸಾಲಿನ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವು ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಳ್ವಾಸ್ ಫಾರ್ಮಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗ್ರೀಷ್ಮ ವಿವೇಕ್ ಆಳ್ವ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ. ಪಿ ವಹಿಸಲಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಜೆ.ಇ.ಇ, ನೀಟ್, ಸಿ.ಇ.ಟಿ, ಸಿ.ಎಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್ ಶೆಣೈ. ಕೆ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಂ. ದೇವಿಚರಣ್ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ಹಿರಿಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.