ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ದ.ಕ.ಹಾ.ಉ.ಸಹಕಾರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಭೇಟಿ

0

ಕಾವು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿರಾಜ ಹೆಗ್ಡೆಯವರು ಜು.18ರಂದು ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿದರು.

ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ದ.ಕ.ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರೂ ಆಗಿರುವ ಚಂದ್ರಶೇಖರ ರಾವ್ ನಿಧಿಮುಂಡರವರು ರವಿರಾಜ ಹೆಗ್ಡೆಯವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಬಳಿಕ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ರವಿರಾಜ ಹೆಗ್ಡೆಯವರಿಗೆ ಅಭಿನಂದನೆ ಸಲ್ಲಿಸಿ ಗೌರವಿಸಲಾಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಶಾಲು ಹೊದಿಸಿ, ಪೇಟ ತೊಡಿಸಿ, ಹಾರ ಹಾಕಿ, ಫಲಪುಷ್ಪ ಸ್ಮರಣಿಕೆ ನೀಡಿ ಅಭಿನಂದಿಸಿದರು. ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ ಸ್ವಾಗತಿಸಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ನಹುಷ ಭಟ್ ವಂದಿಸಿದರು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ, ಸಿಬ್ಬಂದಿಗಳು, ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯ, ಮಾಸ್ ಸಿಬ್ಬಂದಿ ಕಿಶೋರ್‌ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here