ಪುತ್ತೂರು: ದರ್ಬೆ ಪಾಂಗಾಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ 2025-26ನೇ ಸಾಲಿಗೆ ಶಾಲಾ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಹಾಗೂ ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜು.18ರಂದು ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಡೆಯಿತು.
ಶಾಲಾ ಸಂಚಾಲಕಿ ಹಾಗೂ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ಭಗಿನಿ ಪ್ರಶಾಂತಿ ಬಿ.ಎಸ್. ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರನ್ನಾಗಿ ರಘುನಾಥ್ ರೈ ಹಾಗೂ ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್ ಶಾಫಿ ಮತ್ತು ಉಪಾಧ್ಯಕ್ಷರಾಗಿ ತೆರೆಸಾ ಸಿಕ್ವೇರಾ ಅವರನ್ನು ಆಯ್ಕೆ ಮಾಡಲಾಯಿತು.

ರಕ್ಷಕ-ಶಿಕ್ಷಕ ಸಂಘದ ನೂತನ ಉಪಾಧ್ಯಕ್ಷ ರಘುನಾಥ್ ರೈ ಅವರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಕರ್ತವ್ಯಗಳನ್ನು ಮರೆಯುತ್ತಾರೆ. ಶಾಲೆಯ ಅಭಿವೃದ್ಧಿಗಾಗಿ ನಮ್ಮ ಕರ್ತವ್ಯಗಳನ್ನು ಅರಿತು ಒಟ್ಟಾಗಿ ದುಡಿಯಬೇಕು. ಇದಕ್ಕೆ ನಿಮ್ಮೆಲ್ಲರ ಸಹಕಾರ ಅನಿವಾರ್ಯ ಎಂದು ಹೇಳಿದರು.
ನೂತನ ಪದಾಧಿಕಾರಿಗಳನ್ನು ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್. ಹಾಗೂ ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಬಿ.ಎಸ್. ರವರು ಅಭಿನಂದಿಸಿದರು. ಶಾಲಾ ಶಿಕ್ಷಕಿ ಬೃಂದಾ ಗತ ಸಭೆಯ ವರದಿಯನ್ನು ವಾಚಿಸಿದರು. ಶಿಕ್ಷಕಿ ಅನಿತಾ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.