ಕಡಬ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಸರಸ್ವತಿ ವಿದ್ಯಾಲಯ ಕಡಬ ಇವುಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಜು.15ರಂದು ಕಡಬದ ಹನುಮಾನ್ ನಗರ ಕೇವಲ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಚದುರಂಗ ಸ್ಪರ್ಧೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ರೈ ಬಿರ್ಕಿ ಉದ್ಘಾಟಿಸಿ, ಚದುರಂಗ ಸ್ಪರ್ಧೆಯು ಮುಂದಿನ ಜೀವನಕ್ಕೆ ಪಾಠವಾಗಬೇಕು ಎಂದು ಹೇಳಿದರು. ಮುಖ್ಯ ಅತಿಥಿ ಎಸ್ ಜಿ ಎಫ್ ಐ ಚೆಸ್ ಆಟಗಾರ್ತಿ, ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಕುಮಾರಿ ದೀಕ್ಷ ಜಿ.ಎಸ್ ಆಗಮಿಸಿ ಪಂದ್ಯಾಟಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಕೃಷ್ಣ ಶೆಟ್ಟಿ ಕಡಬ ವಹಿಸಿ ಮಾತನಾಡಿದರು. ವಿದ್ಯಾ ಭಾರತಿ ಜಿಲ್ಲಾ ಶಾರೀರಿಕ್ ಪ್ರಮುಖ್ ಪುರುಷೋತ್ತಮ, ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜ್ಯೋತಿ , ಸರಸ್ವತೀ ವಿದ್ಯಾಲಯದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಕಡಬ, ಸರಸ್ವತಿ ಆಂಗ್ಲ ಮಾಧ್ಯಮದ ಅಧ್ಯಕ್ಷರಾದ ಸದಾಶಿವ ಭಟ್, ಸರಸ್ವತಿ ವಿದ್ಯಾಲಯದ ಸಂಚಾಲಕಿ ಸವಿತಾ ಶಿವ ಸುಬ್ರಮಣ್ಯಭಟ್, ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಮಾಧವ ಕೋಲ್ಪೆ, ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಶೈಲ ಶ್ರೀ ರೈ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ವಿಭಾಗದ ಆಡಳಿತ ಮಂಡಳಿಯ ಸದಸ್ಯರಾದ ಶ್ಯಾಮ್ ಪ್ರಸಾದ್ ರೈ, ಸೀತಾರಾಮ ಗೌಡ ಎ. ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸರಸ್ವತಿ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ವಸಂತ ಕೆ ಸ್ವಾಗತಿಸಿ,ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಚಂದ್ರ .ಕೆ. ವಂದಿಸಿದರು. ಶಿಕ್ಷಕಿ ಸೌಮ್ಯಕೆ.ಎ ಕಾರ್ಯಕ್ರಮ ನಿರ್ವಹಿಸಿದರು.
ಸಮಾರೋಪ ಸಮಾರಂಭವು ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಸದಾಶಿವ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ಸಂಸ್ಥೆ ಹಿರಿಯ ವಿದ್ಯಾರ್ಥಿ ಕುಮಾರಿ ದೀಪ್ತಿ ಜಿ.ಎಸ್. ಆಡಳಿತ ಮಂಡಳಿಯ ಸದಸ್ಯರಾದ ಸೀತಾರಾಮ ಗೌಡ, ಎ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜ್ಯೋತಿ, ವಿದ್ಯಾಭಾರತಿ ಜಿಲ್ಲಾ ಶಾರೀರಿಕ್ ಪ್ರಮುಖ್ ಪುರುಷೋತ್ತಮ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ವಿಜೇತರ ಪಟ್ಟಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ವಾಚಿಸಿ ಕಾರ್ಯಕ್ರಮ ನಿರ್ವಹಿಸಿದರು.