ಇಂದು (ಜು.19) ಪುತ್ತೂರಿನಲ್ಲಿ ಸೀರತ್ ಕಮಿಟಿಯ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಉಪನ್ಯಾಸ ಸಮಾರಂಭ

0

ಪುತ್ತೂರು: ಪುತ್ತೂರು ತಾಲೂಕು ಸೀರತ್ ಕಮಿಟಿ ಇದರ ಆಶ್ರಯದಲ್ಲಿ 2024-2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 100 ಫಲಿತಾಂಶ ಗಳಿಸಿದ ಮುಸ್ಲಿಂ ವಿದ್ಯಾಸಂಸ್ಥೆಗಳಿಗೆ ವಿಶೇಷ ಗೌರವ ಅಭಿನಂದನೆ ಹಾಗೂ ಉಪನ್ಯಾಸ ಸಮಾರಂಭವು ಜು.19 ರಂದು ಮಧ್ಯಾಹ್ನ 2 ಗಂಟೆಗೆ ಪುತ್ತೂರು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ಸೀರತ್ ಕಮಿಟಿಯ ಅಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಸುರಯ್ಯ ರವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್ ಆರ್ ರವರು ನೆರವೇರಿಸಲಿದ್ದಾರೆ. ಉಪನ್ಯಾಸವನ್ನು ತರಬೇತುದಾರರಾದ ಉಪನ್ಯಾಸಕ ಅಬ್ದುಲ್ ರಜಾಕ್ ಅನಂತಾಡಿ ರವರು ಶೈಕ್ಷಣಿಕ ರಂಗದಲ್ಲಿ ಪೋಷಕರ ಪಾತ್ರ ಭವಿಷ್ಯ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಆಯ್ಕೆ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ.

ಪುತ್ತೂರು ತಾಲೂಕು ಶ್ರೀರದ್ ಕಮಿಟಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಸುರಯ್ಯ, ಪ್ರಧಾನ ಕಾರ್ಯದರ್ಶಿ ಡಾ. ಹಾಜಿ ಅಬೂಬಕ್ಕರ್ ಆರ್ಲಪದವು, ಕೋಶಾಧಿಕಾರಿ ಎಲ್. ಟಿ. ಅಬ್ದುಲ್ ರಝಾಕ್ ಹಾಜಿ, ಉಪಾಧ್ಯಕ್ಷ ಬಿಎ.ಶಕೂರ್ ಹಾಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here