ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಕಳಪ್ಪಾರು ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ ಕಳಪ್ಪಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಳಪ್ಪಾರು ಒಕ್ಕೂಟದ ಅಧ್ಯಕ್ಷರೂ, ನೆಲ್ಯಾಡಿ ವಲಯ ಅಧ್ಯಕ್ಷರೂ ಆದ ಕುಶಾಲಪ್ಪ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ಲೋಕೇಶ್ ಬಾಗಿಲಗದ್ದೆ, ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಹಿತಿಯ ನಂತರ ಗಿಡ ನೆಡುವ ಕಾರ್ಯಕ್ರಮ ಮತ್ತು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಸದಸ್ಯರುಗಳಿಗೆ ಗಿಡಗಳನ್ನು ನೀಡಲಾಯಿತು. ಕಳಪ್ಪಾರು ಒಕ್ಕೂಟದ ಸೇವಾ ಪ್ರತಿನಿಧಿ ಪ್ರಿಯಲತಾ ಕಾರ್ಯಕ್ರಮ ನಿರೂಪಿಸಿದರು. ಸರಳ ಸ್ವಾಗತಿಸಿ, ಶಶಿನಿ ಸೋಮನ್ ವಂದಿಸಿದರು.