ಆ.24: ರಾಮಕುಂಜ ಆಂಗ್ಲಮಾಧ್ಯಮ ಶಾಲೆಯಲ್ಲಿ ‘ಆಟಿ ಅಮಾಸೆದ ಪೊಲಬು’

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ತುಳುನಾಡಿನ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಆಟಿ ಅಮಾಸೆದ ಪೊಲಬು’ ಆ.24ರಂದು ನಡೆಯಲಿದೆ.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಜಿತ್ ಪಾಲೇರಿ ಉದ್ಘಾಟಿಸಲಿದ್ದಾರೆ. ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ.ರಾಜೇಶ್ ಆಳ್ವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ರಾಮಕುಂಜ ಗ್ರಾ.ಪಂ.ಪಿಡಿಒ ಮೋಹನ್ ಕುಮಾರ್ ಜಿ., ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಸುಂದರ್ ಶೆಟ್ಟಿ, ಕಸಾಪ ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಆಲಂಕಾರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಾಧವ ಪೂಜಾರಿ ಕಯ್ಯಪೆ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಗಿರೀಶ್ ಎ.ಪಿ. ಭಾಗವಹಿಸಲಿದ್ದಾರೆ. ಈ ದಿನದಂದು ತುಳುನಾಡಿನ ವಿಶೇಷ 74 ಬಗೆಯ ಖಾದ್ಯಗಳನ್ನು ಮಕ್ಕಳಿಗೆ ಮತ್ತು ಪೋಷಕರಿಗೆ ಪರಿಚಯಿಸಿ ಅದನ್ನು ಸವಿಯುವ ಅವಕಾಶವನ್ನು ಮಾಡಲಾಗಿದೆ. ವಿದ್ಯಾರ್ಥಿಗಳ ಪೋಷಕರಿಗೆ ತುಳುನಾಡಿನ ವಿವಿಧ ಜನಪದ ಸ್ಪರ್ಧೆಗಳನ್ನು ನಡೆಸಲಾಗುವುದು ಹಾಗೂ ವಿದ್ಯಾರ್ಥಿಗಳಿಂದ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಜರುಗಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here