ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಟಿ ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ಜು.20 ರಂದು ಅರುಣಾ ಥಿಯೇಟರ್ ಬಳಿಯ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬೆಳಿಗ್ಗೆ ಜರಗಲಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ದ.ಕ ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ನಾರಾಯಣ ನಾಯ್ಕ ರವರು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಟಿ ಘಟಕದ ನೂತನ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.