ಕುಂತೂರು: ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪನೆಗೆ ಕಾರಣಕರ್ತರಾದ ಮಾರ್ ಇವಾನಿಯೋಸ್ ಅವರ 72ನೇ ಪುಣ್ಯಸ್ಮರಣೆಯನ್ನು ಮಾಡುವುದರ ಮೂಲಕ ‘ಮಾರ್ ಇವಾನಿಯೋಸ್’ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಮಾರ್ ಇವಾನಿಯೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರೊಂದಿಗೆ ಮೊಂಬತ್ತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಶಿಕ್ಷಣಾರ್ಥಿಗಳಾದ ಸೌಮ್ಯ ಎಂ ಮತ್ತು ಫಾ| ಬೆನ್ಸನ್ ಥಾಮಸ್ ಸಂಕ್ಷಿಪ್ತವಾಗಿ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕರಾದ ರೆ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಮಾರ್ ಇವಾನಿಯೋಸ್ ಅವರ ಜೀವನ, ಸಾಧನೆ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಕುರಿತು ಸ್ಮರಿಸಿ ಅವರ ವ್ಯಕ್ತಿತ್ವದ ಆದರ್ಶಗಳನ್ನು ಗುಣಗಾನಗೈದರು.
ಕಾಲೇಜಿನ ಶಿಕ್ಷಕ ಸಂಘದ ಕಾರ್ಯದರ್ಶಿ ಪ್ರೀತಿಕಾ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಹರೀಶ್ ಕುಮಾರ್ ಟಿ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಿಲ್ಪಾ ಕೆ ಆರ್ ವಂದಿಸಿದರು. ಪ್ರಶಿಕ್ಷಣಾರ್ಥಿಗಳಾದ ಸುಜಾ ಥಾಮಸ್ ಮತ್ತು ಆಶಾಶ್ರೀ ಟಿ ಪಿ ಕಾರ್ಯಕ್ರಮ ನಿರೂಪಿಸಿದರು.