ಪುತ್ತೂರು: ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯ ಆರ್.ಜಿ.ಎಸ್.ಎ ಯೋಜನೆಯಡಿ ರಾಜ್ಯ ಗ್ರಾಮ ಪಂಚಾಯಿತಿಗಳಿಗೆ ಐಎಸ್‌ಒ ಪ್ರಮಾಣೀಕರಣವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಒಂದು ದಿನದ ತರಬೇತಿಯನ್ನು ಹಮ್ಮಿಕೊಂಡಿದ್ದು, ಈ ತರಬೇತಿಗೆ ಸ್ವಂತ ಸಂಪನ್ಮೂಲ ಸಂಗ್ರಹಣೆಯಲ್ಲಿ ಅತೀ ಹೆಚ್ಚು ಸಂಗ್ರಹಣೆ ಮಾಡಿದ ಕ್ರೀಯಾಶೀಲ ಕೆಯ್ಯೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಪಿಡಿಒ ಮತ್ತು ಕಾರ್ಯದರ್ಶಿಗಳನ್ನು ನಿಯೋಜಿಸುವಂತೆ ಪಂಚಾಯತ್‌ರಾಜ್ ಆಯುಕ್ತಾಲಯ ಬೆಂಗಳೂರು ಇವರು ಸೂಚಿಸಿದ್ದಾರೆ.
ತರಬೇತಿಯು ಜು.21 ರಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ವಸತಿ ನಿಲಯ ಮೈಸೂರು ಇಲ್ಲಿ ನಡೆಯಲಿದೆ. ಈ ತರಬೇತಿಯಲ್ಲಿ ಕೆಯ್ಯೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಭಾಗವಹಿಸಲಿದ್ದಾರೆ. ಪುತ್ತೂರು ತಾಲೂಕಿನಿಂದ ಕೆಯ್ಯೂರು ಮತ್ತು ಉಪ್ಪಿನಂಗಡಿ ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದೆ.
`ತೆರಿಗೆ ಸಂಗ್ರಹಣೆಯಲ್ಲಿ ಕೆಯ್ಯೂರು ಗ್ರಾಪಂ ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ಸ್ವಂತ ಸಂಪನ್ಮೂಲ ಸಂಗ್ರಹಣೆಯಲ್ಲಿ ಅತೀ ಹೆಚ್ಚು ಸಂಗ್ರಹಣೆ ಮಾಡಿದ ಕ್ರೀಯಾಶೀಲ ಪಂಚಾಯತ್ ಎಂಬ ಹೆಗ್ಗಳಿಕೆಗೆ ಗ್ರಾಮ ಪಂಚಾಯತ್ ಪಾತ್ರವಾಗಿದ್ದು ಖುಷಿ ತಂದಿದೆ. ಸಹಕರಿಸಿದ ಗ್ರಾಮಸ್ಥರಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಧನ್ಯವಾದಗಳೊಂದಿಗೆ ಮುಂದೆಯೂ ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.’
ಶರತ್ ಕುಮಾರ್ ಮಾಡಾವು, ಅಧ್ಯಕ್ಷರು ಕೆಯ್ಯೂರು ಗ್ರಾಮ ಪಂಚಾಯತ್
