ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಸಾಕ್ಷರತಾ ಕಾರ್ಯಗಾರ

0

ಪುತ್ತೂರು: ಜೀವನ ಮಟ್ಟದ ಉನ್ನತೀಕರಣಕ್ಕೆ ಹಣಕಾಸು ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳ ಅರಿವು ಅತ್ಯಗತ್ಯ ಎಂದು ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ತಿಳಿಸಿದರು.

ಲೀಡ್ ಬ್ಯಾಂಕ್ ಕಛೇರಿ ದಕ್ಷಿಣ ಕನ್ನಡ, ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಪುತ್ತೂರು ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಫುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾದ ಹಣಕಾಸು ಸಾಕ್ಷರತಾ ಕಾರ್ಯಗಾರದಲ್ಲಿ ಅವರು ಮಾತನಾಡಿದರು.


ಮಂಗಳೂರು ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಎನ್. ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿ ನಿಮ್ಮ ಕ್ಯಾಂಪಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಿಂದ ಬ್ಯಾಂಕ್ ಸೌಲಭ್ಯವನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಿ ಹಾಗೂ ಸಾಮಾಜಿಕ ಭದ್ರತೆಯ ಯೋಜನೆಯನ್ನು ಪ್ರತಿಯೊಬ್ಬರು ನೋದಾಯಿಸಿಕೊಳ್ಳಿ ಎಂದು ತಿಳಿಸಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಪುತ್ತೂರು ಆಪ್ತ ಸಮಾಲೋಚಕಿ ಗೀತಾ ವಿಜಯ ಮಾತನಾಡಿ ಭಾರತ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ಸುರಕ್ಷಿತ ಡಿಜಿಟಲ್ ವ್ಯವಹಾರ ಹಾಗೂ ಕೆನರಾ ಬ್ಯಾಂಕ್‌ನಲ್ಲಿ ಇರುವ ಸೇವಾ ಸೌಲಭ್ಯಗಳ ಸ೦ಪೂರ್ಣ ಮಾಹಿತಿಯನ್ನು ವಿವರಿಸಿದರು.


ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಛೇರಿಯ ಸೀನಿಯರ್ ಮ್ಯಾನೇಜರ್ ಹರೀಶ್ ಕುಮಾರ್, ಹಣಕಾಸು ಸೇರ್ಪಡೆ(FI section)ಯ ಅರನಬ್ ರೋಯ್, ಪಾಲಿಟೆಕ್ನಿಕ್ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಈಶ್ವರಚಂದ್ರ ಡಿ.ಎನ್., ನೆಹರೂನಗರ ಕೆನರಾ ಬ್ಯಾಂಕ್ ಮ್ಯಾನೇಜರ್ ತೇಜಕುಮಾರ್, ಕಾಲೇಜಿನ ಉಪಾನ್ಯಾಸಕರು, ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಇಲೆಕ್ಟ್ರಾನಿಕ್ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಮುರಳೀಧರ ಎಸ್. ವಂದಿಸಿದರು.

LEAVE A REPLY

Please enter your comment!
Please enter your name here