ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದಲ್ಲಿ ಶಿಕ್ಷಣ ಮತ್ತು ಸಮಾಜ ಸೇವಾ ಉದ್ದೇಶಕ್ಕಾಗಿ ಸರಕಾರದಿಂದ ನಿವೇಶನ ಮಂಜೂರುಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಪುತ್ತೂರು ಬಂಟರ ಸಂಘದಿಂದ ಸನ್ಮಾನಿಸಲಾಯಿತು.
ದೇವಸ್ಥಾನದ ಅಭಿವೃದ್ದಿ ಕಾರ್ಯಕ್ಕೆ ಸಂಬಂಧಿಸಿ ಸಭೆ ಮುಗಿಸಿ ಹೊರ ಬಂದ ಶಾಸಕರನ್ನು ಬಂಟರ ಸಂಘದ ನಿಯೋಗ ಭೇಟಿ ಮಾಡಿ ಅಭಿನಂದಿಸಿದರು. ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿಯವರು ಶಾಸಕರನ್ನು ಸನ್ಮಾನಿಸಿದರು.
ಈ ಸಂದರ್ಭ ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು, ನಾಮನಿರ್ದೇಶನ ಸದಸ್ಯ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಅನಿತಾ ಹೇಮನಾಥ್, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯ ಸುಭಾಷ್ ರೈ ಬೆಳ್ಳಿಪ್ಪಾಡಿ, ಮಹಾಬಲ ರೈ ವಳತ್ತಡ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಸದಾಶಿವ ರೈ, ಪುತ್ತೂರು ನಗರಯೋಜನಾ ಪ್ರಾಧಿಕಾರದ ಸದಸ್ಯ ನಿಹಾಲ್ ಪಿ ಶೆಟ್ಟಿ ಉಪಸ್ಥಿತರಿದ್ದರು.