ಪುತ್ತೂರು: ಪುರುಷರಕಟ್ಟೆಯ ಸಿದ್ದಣ್ಣ ಕಾಂಪ್ಲೆಕ್ಸ್‌ನಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನ ಆಶ್ರಯದಲ್ಲಿ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ನರಿಮೊಗರು ಗ್ರಾಮ ಪಂಚಾಯತ್, ಪ್ರಸನ್ನ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಲಾಲ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಚಿಕಿತ್ಸೆಯು ಜು.20ರಂದು ಪುರುಷರಕಟ್ಟೆಯಲ್ಲಿರುವ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾ ಭವನದಲ್ಲಿ ನಡೆಯಲಿದೆ.
ಶಿಬಿರವನ್ನು ಮಹಾವೀರ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಸುರೇಶ್ ಪುತ್ತೂರಾಯ ಉದ್ಘಾಟಿಸಲಿದ್ದಾರೆ. ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಇಸಿಜಿ ಪರೀಕ್ಷೆ, ಬಿಪಿ. ಶುಗರ್ ಪರೀಕ್ಷೆಗಳನ್ನು ಉಚಿತವಾಗಿ ನಡೆಸಿ ಆಯ್ದ ಔಷಧಿಗಳನ್ನು ಉಚಿತವಾಗಿ ನೀಡಲಾಗುವುದು. ಅಗತ್ಯವಿದ್ದಲ್ಲಿ ಶೇ.20 ರಿಯಾಯತಿತಿ ದರದಲ್ಲಿ ಎಲ್ಲಾ ರಕ್ತ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಡಾ.ಸುಜಯಕೃಷ್ಣ ತಂತಿ ಕೆಮ್ಮಿಂಜೆ ತಿಳಿಸಿದ್ದಾರೆ.