ಕೋಡಿಂಬಾಡಿ ಹಾಲು ಉತ್ಪಾದಕರ ಸಂಘಕ್ಕೆ ತಾಲೂಕು ಉತ್ತಮ ಸಹಕಾರಿ ಸಂಘ ಪ್ರಶಸ್ತಿ

0

ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಪುತ್ತೂರು ತಾಲೂಕಿನಲ್ಲಿ ಉತ್ತಮ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ತೆಂಕಿಲ ದರ್ಶನ್ ಹಾಲ್‌ನಲ್ಲಿ ಜು.19ರಂದು ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಡುಮನೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕೆ.ಯವರು ಪ್ರಶಸ್ತಿ ಸ್ವೀಕರಿಸಿದರು. ದ.ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಉಪಾಧ್ಯಕ್ಷ ಉದಯ ಕುಮಾರ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ ಪ್ರಶಸ್ತಿ ಪ್ರದಾನ ಮಾಡಿದರು. ಒಕ್ಕೂಟದ ನಿರ್ದೇಶಕರಾದ ಎಸ್.ಬಿ ಜಯರಾಮ ರೈ, ಚಂದ್ರಶೇಖರ ರಾವ್, ಪ್ರಭಾಕರ, ಭರತ್ ನೆಕ್ರಾಜೆ, ಸವಿತಾ ಶೆಟ್ಟಿಯವರು ಉಪಸ್ಥಿತರಿದ್ದರು.


53 ವರ್ಷಗಳ ಇತಿಹಾಸವಿರುವ ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನ ಲೆಕ್ಕಪರಿಶೋಧನೆಯಲ್ಲಿ ಪ್ರಥಮ ಬಾರಿಗೆ ಎ ಶ್ರೇಣಿಯನ್ನು ಪಡೆದುಕೊಂಡಿದೆ. ಅಲ್ಲದೆ ಈ ವರ್ಷ ಸಂಘವು ಪ್ರಥಮ ಬಾರಿಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸಂಘದ ಕಾರ್ಯನಿರ್ವಹಣೆ, ಸ್ವಚ್ಚತೆ, ಬಿಎಂಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ತರಬೇತಿ ಪಡೆದ ಆಡಳಿತ ಮಂಡಳಿ, ಸಿಬಂದಿ ವರ್ಗದವರ ಸಹಕಾರದಿಂದ ಪ್ರಶಸ್ತಿ ಪಡೆದುಕೊಂಡಿದೆ ಎಂದು ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಡುಮನೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here