ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ನಲ್ಲಿ 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಇನ್ನೂ ಕೂಡ ನಡೆದಿರುವುದಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
2025-2026ನೇ ಪ್ರಥಮ ಸುತ್ತಿನ ಗ್ರಾಮಸಭೆಗೆ ಜು.22ರಂದು ದಿನಾಂಕ ನಿಗದಿಯಾದರು ಗ್ರಾಮಸಭೆ ನಡೆಸುವ ಇಚ್ಛಾಶಕ್ತಿ ಪಂಚಾಯತ್ ಗೆ ಇರುವ ಬಗ್ಗೆ ಯಾವುದೇ ಮಾಹಿತಿ ಕಂಡುಬರುತ್ತಿಲ್ಲ. ಅರಿಯಡ್ಕ ಗ್ರಾಮ ಪಂಚಾಯತ್ ನ ಕೆಲ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು, ನಡೆದು ಹೋಗಲು ಕೂಡ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಈ ಬಗ್ಗೆ ದೂರು ನೀಡಲು ಗ್ರಾಮ ಸಭೆ ಕೂಡ ಸರಿಯಾಗಿ ನಡೆಯುತ್ತಿಲ್ಲ. ಸಂಬಂಧಪಟ್ಟ ಇಲಾಖೆ ಈ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಆಗ್ರಹವಾಗಿದೆ.