ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ, ಇದೇ ಜು.18ರಂದು ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗಾಗಿ, ‘ವಿಜ್ಞಾನ ಯೋಜನೆ’ ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ, ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಬಿ.ಎಚ್. ಅಜಿತ್ ಹೆಬ್ಬಾರ್ ಇವರು, ವಿಜ್ಞಾನ ಯೋಜನೆ ಎಂದರೇನು?, ವಿಜ್ಞಾನ ಯೋಜನೆಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳು, ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಿಗೆ ಯೋಜನೆಗಳ ಸಲ್ಲಿಕೆ ಮುಂತಾದ ಮಹತ್ತರ ವಿಷಯಗಳ ಕುರಿತು ಸೂಕ್ತ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.



ಈ ಕಾರ್ಯಕ್ರಮವನ್ನು ಉಪ ಪ್ರಾಂಶುಪಾಲರಾದ ಶ್ರೀದೇವಿ ಹೆಗ್ಡೆ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು, ಪ್ರಾಂಶುಪಾಲರಾದ ಸಿಂಧೂ ವಿ. ಜಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.