ಪುತ್ತೂರು: ಬೊಳುವಾರು ಪುತ್ತೂರು ಇವರ ವತಿಯಿಂದ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು, ಇವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು, ಇವರ ಸಹಭಾಗಿತ್ವದಲ್ಲಿ ವಿಶ್ವ ಭಾರತಿ ಯಕ್ಷ ಸಂಭ್ರಮದ ಅಂಗವಾಗಿ ತುಳು ಶಿವಳ್ಳಿ ಸಭಾಭವನ ಬಿ.ಸಿ.ರೋಡಿನಲ್ಲಿ ಯಕ್ಷಗಾನ ತಾಳಮದ್ದಳೆ “ಪಾರ್ಥ ಸಾರಥ್ಯ” ಎಂಬ ಆಖ್ಯಾನದೊಂದಿಗೆ ಜರಗಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ಮುಳಿಯಾಲ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಜಯರಾಮ ಭಟ್, ಮುರಳೀಧರ ಆಚಾರ್ಯ ನೇರಂಕಿ, ಮಾ| ಪ್ರತಾಪ್ ಸಹಕರಿಸಿದರು. ಮುಮ್ಮೇಳದಲ್ಲಿ, ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀಕೃಷ್ಣ), ಶುಭಾ ಅಡಿಗ (ದುರ್ಯೋಧನ), ಹರಿಣಾಕ್ಷಿ ಜೆ.ಶೆಟ್ಟಿ (ಬಲರಾಮ) , ಶಾರದಾ ಅರಸ್ (ಅರ್ಜುನ )ಸಹಕರಿಸಿದರು. ಯಕ್ಷ ಸಂಜೀವಿನಿ ಸೇವಾ ಟ್ರಸ್ಟ್ ನ ನಿರ್ದೇಶಕ ಪ್ರಶಾಂತ್ ಹೊಳ್ಳ ಸ್ವಾಗತಿಸಿ, ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ವಂದಿಸಿದರು.