ನಿವೃತ್ತ ಸರಕಾರಿ ಸೌಕರರಿಗೆ ಪಿಂಚಣಿ, ತುಟ್ಟಿಭತ್ಯೆ ಪರಿಸ್ಕರಣೆ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿ ನಿವೃತ್ತ ಸರಕಾರಿ ನೌಕರರ ಸಂಘದಿಂದ ಮನವಿ

0

ಪುತ್ತೂರು: ನಿವೃತ್ತ ಸರಕಾರಿ ಸೌಕರರಿಗೆ ಪಿಂಚಣಿ ಪರಿಸ್ಕರಣೆ ಮತ್ತು ತುಟ್ಟಿಭತ್ಯೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸುವಂತೆ ಆಗ್ರಹಿಸಿ ನಿವೃತ್ತ ಸರಕಾರಿ ನೌಕರರ ಸಂಘದಿಂದ ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.


2026ರ ಏಪ್ರೀಲ್ ಮೊದಲು ನಿವೃತ್ತರಾಗುವ ಸರಕಾರಿ ನೌಕರರಿಗೆ ಪಿಂಚಣಿ ಮತ್ತು ತುಟ್ಟಿಭತ್ಯೆ ಪರಿಷ್ಕರಣೆ ಸಾಧ್ಯವಿಲ್ಲ ಎಂದು ಕೇಂದ್ರ ಅರ್ಥ ಸಚಿವೆ ನಿರ್ಮಲ ಸೀತಾರಾಮನ್ ಲೋಕಸಭೆಯಲ್ಲಿ ಆರ್ಥಿಕ ಬಿಲ್‌ನ್ನು ಮಂಡಿಸಿದ್ದಾರೆ. ಇದರಿಂದ ನಿವೃತ್ತ ಸರಕಾರಿ ನೌಕರರಿಗೆ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಫೆಡರೇಶನ್ ಅಧ್ಯಕ್ಷ ಪಿ.ಕೆ ಶರ್ಮರವರು ನೀಡಿರುವ ಕರೆಯಂತೆ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಪುತ್ತೂರು ಸಂಘದಿಂದ ತಹಶೀಲ್ದಾರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.ʼ


ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಐತ್ತಪ್ಪ ನಾಯ್ಕ, ಸುಂದರ ನಾಯ್ಕ, ಕ್ಸೇವಿಯರ್ ಡಿ’ಸೋಜ, ಸೂರಪ್ಪ ಗೌಡ, ರಾಮಣ್ಣ ನಾಯ್ಕ, ಶ್ರೀಧರ ರೈ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here