ಕಡಬ: 8ನೇ ವರ್ಷದ ಮೊಸರು ಕುಡಿಕೆ ಉತ್ಸವ- ಆಮಂತ್ರಣ ಪತ್ರಿಕೆ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

0

ಕಡಬ: ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಕಡಬ ಪ್ರಖಂಡ ವಿ.ಹಿಂ.ಪ.ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಇದರ ಆಶ್ರಯದಲ್ಲಿ ನಡೆಯುವ 8ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜು.20 ರಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು . ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಕಡಪ ಪ್ರಖಂಡ ಗೌರವಾಧ್ಯಕ್ಷ ವಾಸುದೇವ ಭಟ್ ಕಡ್ಯ, ವಿಹಿಂಪ ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ,ಯಕ್ಷಗೆಳಯರ ಬಳಗ ಕಡಬ ಇದರ ಅಧ್ಯಕ್ಷ ಕೃಷ್ಣ ಕಾರಂತ್ ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್ ಕಡಬ ಪ್ರಖಂಡ ಕಾರ್ಯದರ್ಶಿ ಪ್ರಮೀಳಾ ಲೋಕೇಶ್ ರವರು ಸ್ವಾಗತಿಸಿ ವಂದಿಸಿದರು.
ಬಳಿಕ ಶ್ರೀ ಯಕ್ಷ ಗೆಳೆಯರ ಕಡಬ ಇವರ ಪ್ರಾಯೋಜಕತ್ವದಲ್ಲಿ ನಚಿಕೇತ ಎಂಬ ತಾಳ ಮದ್ದಲೆ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here