ವಿದ್ಯಾಮಾತಾದಲ್ಲಿ ಪಿಯುಸಿ , ಡಿಗ್ರಿ ನಂತರ ಮುಂದೇನು ಕಾರ್ಯಾಗಾರ

0

ಸರಕಾರಿ, ಖಾಸಗಿ ಕ್ಷೇತ್ರದ ಉದ್ಯೋಗಾವಕಾಶ ಮಾಹಿತಿ ಪಡೆದ ಯುವ ಆಕಾಂಕ್ಷಿಗಳು


ಪುತ್ತೂರು : ಹಲವಾರು ಸರಕಾರಿ ನೇಮಕಾತಿಗಳಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ನೇಮಕಾತಿಗೊಳ್ಳುವಂತೆ ಮಾಡಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಕಛೇರಿ ಪುತ್ತೂರಿನಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಯುಸಿ/ಪದವಿ ವ್ಯಾಸಂಗದ ನಂತರದ ಅವಕಾಶಗಳ ಕುರಿತಾಗಿ ಒಂದು ದಿನದ ಮಾಹಿತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.


ಸ್ಪರ್ಧಾತ್ಮಕ ಪರೀಕ್ಷೆಗಳ ಖ್ಯಾತ ತರಬೇತುದಾರ ಹಾಗೂ ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿರವರು ಕಾರ್ಯಾಗಾರವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.


ಇದೇ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಪ್ರಾಸ್ತಾವಿಕವಾಗಿ ಮಾತನಾಡಿ , ಖಾಸಗಿ ಮತ್ತು ಸರಕಾರಿ ವಲಯದ ಉದ್ಯೋಗಗಳ ಮಹತ್ವವನ್ನು ವಿವರಿಸಿ, ಅಕಾಡೆಮಿಯಲ್ಲಿರುವ ಅವಕಾಶಗಳ ಕುರಿತು ಬೆಳಕು ಚೆಲ್ಲಿದರು. ನಂತರದಲ್ಲಿ ಅರವಿಂದ ಚೊಕ್ಕಾಡಿರವರು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಿದರು.


ಅಕಾಡೆಮಿಯಲ್ಲಿ ಪ್ರತಿದಿನ ನಡೆಯಲಿದೆ ಉಚಿತ ಕೌನ್ಸಿಲಿಂಗ್:
ಮಾಹಿತಿಗಳ ಕೊರತೆಯಿಂದ ಹಲವಾರು ನೇಮಕಾತಿ ಪ್ರಕ್ರಿಯೆಗಳಲ್ಲಿ ಉದ್ಯೋಗಾಕಾಂಕ್ಷಿಗಳು ಅವಕಾಶ ಕಳೆದುಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೌನ್ಸಿಲಿಂಗ್ ನಡೆಯಲಿದೆ. ಆಸಕ್ತರು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಲು ಪ್ರಕಟಣೆ ತಿಳಿಸಿದೆ.ಇನ್ನೂ ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ಪುತ್ತೂರು ದೂರವಾಣಿ- 9148935808 / 96204 68869 ಅಥವಾ ಸುಳ್ಯ ಶಾಖೆಯ ದೂರವಾಣಿ, 9448527606 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here