ಪುತ್ತೂರು: ಪ್ರಸ್ತುತ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹಲವೆಡೆ ಅಡಿಕೆಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಮಳೆ ಇದೇ ರೀತಿ ಮುಂದುವರೆದರೆ ಆಗಸ್ಟ್ ತಿಂಗಳ ನಂತರ ಅಡಿಕೆ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಕಾರಣ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತೋಟಗಾರಿಕೆ ಇಲಾಖೆ ತಿಳಿಸಿದೆ.

ಅಡಿಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶ/ಕೀಟ/ರೋಗ ನಿರ್ವಹಣೆ ಸಂಬಂಧ ಗೊಬ್ಬರ/ಸೂಕ್ಷ್ಮ ಪೋಷಕಾಂಶ/ಕೀಟನಾಶಕ/ಶಿಲೀಂಧ್ರನಾಶಕಗಳನ್ನು ಖರೀದಿಸುವ ರೈತರಿಗೆ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ನವೀನ ತಂತ್ರಜ್ಞಾನಗಳು ಕಾರ್ಯಕ್ರಮದಡಿ ಸಹಾಯಧನ ಸೌಲಭ್ಯ ಲಭ್ಯವಿದೆ. ರೈತರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಅಥವಾ ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರೇಖಾ ಎ., (೯೭೩೧೮೫೪೫೨೭)ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.