ಕಬಕ:ಗಾಂಜಾ ಮಾರಾಟ ಯತ್ನ ಪ್ರಕರಣ : ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಪುತ್ತೂರು:9 ವರ್ಷಗಳ ಹಿಂದೆ ಕಬಕದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.


2016ರ ಡಿ.16ರಂದು ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ಮೋಟಾರ್ ಸೈಕಲ್ (K L 14 C 8337) ನಲ್ಲಿ ವ್ಯಕ್ತಿಯೋರ್ವ 500 ಗ್ರಾಂ ತೂಕದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆಂದು ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಪೊಲೀಸರು ಪತ್ತೆ ಮಾಡಿ,ಆರೋಪಿಯಾಗಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ಗ್ರಾಮದ ಅಬ್ಬಾಸ್ ಖಾಲಿದ್ ಅಬ್ಬಾಸ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಬಳಿಕ ಆರೋಪಿ ನ್ಯಾಯಾಲಯದಿಂದ ಜಾಮೀನಿನ ಮೂಲಕ ಹೊರ ಬಂದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ಆರೋಪಿಯ ಮೇಲೆ ವಾರಂಟ್ ಜಾರಿ ಮಾಡಿತ್ತು.ದ.ಕ ಜಿಲ್ಲಾ ಎಸ್ಪಿ ಡಾ.ಅರುಣ್ ಮತ್ತು ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಂತೆ ನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಾನ್ಸನ್ ಡಿ’ಸೋಜ ಅವರ ನಿರ್ದೇಶನದಂತೆ ಎಸ್.ಐ ಆಂಜನೇಯ ರೆಡ್ಡಿಯವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿಗಳಾದ ವಸಂತ ಗೌಡ, ಸ್ಕರಿಯ, ಗಿರಿಪ್ರಶಾಂತ್‌ರವರು ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಹೊಸದುರ್ಗ ಎಂಬಲ್ಲಿ ಬಂಽಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here