ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಿವಿಧ ಕಡೆ ಬೇರೆಯವರಲ್ಲಿ ಸ್ವಾಧೀನವಿದ್ದ, ಜಾಗವನ್ನು ದೇವಳಕ್ಕೆ ಮರು ಸ್ವಾಧೀನ ಪಡಿಸುವ ಕಾರ್ಯಕ್ಕೆ ಇನ್ನಷ್ಟು ವೇಗ ಸಿಕ್ಕಿದೆ. ಇದಕ್ಕೆ ಪೂರಕವಾಗಿ ಶಾಸಕ ಅಶೋಕ್ ರೈ ಅವರಿಗೆ ಕಂಡ ಕನಸಿನಂತೆ ಈಶನ ಕ್ಷೇತ್ರದ ಜಾಗವನ್ನು ಈಶನಿಗೆ ಒಪ್ಪಿಸುವ ಕೆಲಸವನ್ನು ಶಾಸಕರ ಮಾರ್ಗದರ್ಶನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಸಮಿತಿ ಸದಸ್ಯರು ಸೌಹಾರ್ದ ರೀತಿಯಲ್ಲಿ ನೆರವೇರಿಸಿದ್ದಾರೆ.

ನೆಲ್ಲಿಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸುಮಾರು 1.8 ಎಕ್ರೆ ಜಾಗವನ್ನು ದೇವಸ್ಥಾನಕ್ಕೆ ಮರು ಸ್ವಾಧೀನ ಪಡಿಸುವ ಕಾರ್ಯ ಜು.22ರಂದು ನಡೆಯಿತು.
ಪುರಾತನದಿಂದ ಗೇಣಿ ಹಕ್ಕಿನಲ್ಲಿದ್ದ ನೋಟರಿ ನ್ಯಾಯವಾದಿ ನಿರ್ಮಲ್ ಕುಮಾರ್ ಜೈನ್ ಅವರು ಸಂತೊಷ ಪೂರ್ವಕವಾಗಿ ದೇವಸ್ಥಾನಕ್ಕೆ ಜಾಗವನ್ನು ಸಮರ್ಪಣೆ ಮಾಡಿದ್ದಾರೆ. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ ವಿ ವಿನಯ ಸುವರ್ಣ, ಈಶ್ವರ ಬೆಡೇಕರ್, ಸುಭಾಷ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ಉಪ್ಪಿನಂಗಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಕುಂಜೂರು ಮದಗ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಸದಸ್ಯ ರೋಹನ್ ರಾಜ್, ನಗರ ವಲಯ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್ ಗೌಡ ಪಡ್ಡಾಯೂರು, ಪ್ರಕಾಶ್ ಗೌಡ, ಸುದರ್ಶನ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.