ಪುತ್ತೂರು:ಶತಮಾನದ ಹೊಸ್ತಿಲಲ್ಲಿರುವ ಬನ್ನೂರು ಸ.ಹಿ.ಪ್ರಾ ಶಾಲೆಯಲ್ಲಿ ಶತಮಾನ ವರ್ಷ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವುಗಳ ಸಹಯೋಗದಲ್ಲಿ ಜು.21ರಂದು ವನಮಹೋತ್ಸವ ನೆರವೇರಿತು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗುರುಪ್ರಸಾದ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಯಶೋಧರ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷೆ ವೇದಾವತಿ ರಾಜೇಶ್, ಕಾರ್ಯದರ್ಶಿ ಅನುಸೂಯ ಬಾ, ಕೋಶಾಧಿಕಾರಿ ಸುಪ್ರೀತ್ ಕಣ್ಣಾರಾಯ, ಉಪಾಧ್ಯಕ್ಷ ರವಿಪ್ರಸಾದ್ ಶೆಟ್ಟಿ, ಪದಾಧಿಕಾರಿಗಳಾದ ಗಣೇಶ್ ಶೆಟ್ಟಿ, ಗಂಗಾಧರಾ ಎಲಿಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲೆಗೆ ವಿಶೇಷವಾಗಿ ಮಿಯ ವಾಕಿ ಅರಣ್ಯವನ್ನು ನಿರ್ಮಿಸಿಕೊಟ್ಟ ಮೆಸ್ಕಾಂ ಕಿರಿಯ ಇಂಜಿನಿಯರ್ ದುರ್ಗಾಸಿಂಗ್‌ರವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್‌ನಿಂದ ಶಾಲೆಗೆ ಕೊಡುಗೆಯಾಗಿ ನೀಡಿದ ಟೇಬಲ್‌ನ್ನು ಸ್ವೀಕರಿಸಲಾಯಿತು.
ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ಮುಖ್ಯ ಗುರು ಮಹಮದ್ ಅಶ್ರಫ್ ಕಾರ್ಯಕ್ರಮ ನಿರೂಪಿಸಿದರು.