ಆಲಂಕಾರು: ಬಿ.ಜೆ.ಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಬಿಜೆಪಿ ಕುಟ್ರುಪಾಡಿ ಮಹಾ ಶಕ್ತಿ ಕೇಂದ್ರದ ಬಲ್ಯ ಬೂತ್ ಸಂಖ್ಯೆ 50 ರ ಕಾರ್ಯಕರ್ತರಾದ ಜನಾರ್ದನ ಗೌಡ ಆರಿಗ ಬಲ್ಯ ರವರ ಮನೆಗೆ ಬೇಟಿ ನೀಡಿ ಬೂತ್ ಸಮಿತಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರುಗಳಾದ ರವೀಂದ್ರ ಶೆಟ್ಟಿ ಉಳಿದೂಟ್ಟು ರಾಕೇಶ್ ರೈ ಕೆಡೆಂಜಿ , ಸುಳ್ಯ ಮಂಡಲ ಪ್ರದಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಉಪಾಧ್ಯಕ್ಷ ಗಣೇಶ ಉದನಡ್ಕ ,ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ ಕೆ , ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕೃಷ್ಣ ಯಂ ಆರ್, ಸುಳ್ಯ ಮಂಡಲ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿ ಶಿವ ಪ್ರಸಾದ್ ರೈ ಮೈಲೇರಿ ,ಕಟ್ರುಪಾಡಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ದೇಂತಾರು ,ಬಲ್ಯ ಶಕ್ತಿ ಕೇಂದ್ರ ಪ್ರಮುಖ ಕೃಷ್ಣಪ್ಪ ದೇವಾಡಿಗ ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರ್ಯದರ್ಶಿ ಪುಷ್ಪರಾಜ್ ಬೂತ್ ಸಮಿತಿ ಪದಾಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರುಗಳು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಪಾರ್ಟಿಯ ಪಾರ್ಟಿಯ ಪ್ರಮುಖ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.