ಆಲಂಕಾರು ಜೇಸಿಐ ವತಿಯಿಂದ ವನಮಹೋತ್ಸವ

0

ಆಲಂಕಾರು: ಜೇಸಿಐ ಆಲಂಕಾರು ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಕುಂತೂರುಪದವಿನ ಸಂತ ಜಾರ್ಜ್ ಪ್ರೌಢಶಾಲೆಯಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಶಿಕ್ಷಕಿ ಭುವನೇಶ್ವರಿ ಪಿ.ಎಮ್ ಭಾಗವಹಿಸಿದ್ದರು.ಶಾಲಾ ವಠಾರದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲಂಕಾರು ಜೇಸಿಐ ಘಟಕದ ಅಧ್ಯಕ್ಷ ಜೇಸಿ ಗುರುರಾಜ್ ರೈ ವಹಿಸಿದ್ದರು.ಈ ಸಂದರ್ಭದಲ್ಲಿ ಸಂತ ಜಾರ್ಜ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಹರಿಶ್ಚಂದ್ರ ಕೆ.,ಶಿಕ್ಷಕ ವೃಂದ,ವಿದ್ಯಾರ್ಥಿಗಳು ಹಾಗೂ ಜೇಸಿಐ ನ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here