ಕಾಂಚನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ, ವಿವಿಧ ಸಂಘಗಳ ಉದ್ಘಾಟನೆ

0

ಉಪ್ಪಿನಂಗಡಿ: ಉಜಿರೆಯ ಎಸ್‌ಡಿಎಂ ಎಜುಕೇಶನಲ್ ಸೊಸೈಟಿ (ಎಸ್‌ಡಿಎಂಇಎಸ್)ಯ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ದೀಪ ಪ್ರಜ್ವಲಿಸಿ ಸಂಘಗಳ ಉದ್ಘಾಟನೆಯನ್ನು ಮಾಡಿದರು. ನಂತರ ಮಾತನಾಡಿದ ಅವರು ಪತ್ರಿಕೋದ್ಯಮ ಎಂಬುದು ಶಾಲಾ ಬಿತ್ತಿಪತ್ರಿಕೆಯಿಂದ ಪ್ರಾರಂಭಗೊಂಡು ಮುಂದೆ ಪತ್ರಿಕೆಯವರೆಗೂ ಸಾಗುವ ಹಾದಿ ಹಾಗೂ ವಿವಿಧ ಕ್ಷೇತ್ರಗಳಾದ ಸಿನಿಮಾ ಧಾರಾವಾಹಿ, ಫೆಸ್‌ಬುಕ್, ಇನ್‌ಸ್ಟಾಗ್ರಾಂ ಮುಂತಾದವುಗಳೆಲ್ಲವೂ ಪತ್ರಿಕೋದ್ಯಮ ವಿಭಾಗಕ್ಕೆ ಸೇರಲ್ಪಟ್ಟಿದ್ದು. ಸೃಜನಾತ್ಮಕ ಅಭಿವ್ಯಕ್ತತೆಗೆ ಒಳ್ಳೆಯ ವೇದಿಕೆ ಎಂದು ಹೇಳಿದರು.


ಶಾಲಾ ಮುಖ್ಯಗುರು ರಮೇಶ್ ಮಯ್ಯರವರು ಮಾತನಾಡಿ, ಯಾವುದೇ ಕಾರ್ಯಕ್ರಮಗಳು ಹೆಸರಿಗೆ ಮಾತ್ರವಾಗಿರದೆ ಅದರಿಂದ ವಿದ್ಯಾರ್ಥಿಗಳು ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.

ವಿದ್ಯಾರ್ಥಿ ಸರಕಾರ ಅಧಿಕಾರ ಸ್ವೀಕಾರ:
ಕಳೆದ ಶೈಕ್ಷಣಿಕ ವರ್ಷದ ಮಂತ್ರಿಮಂಡಲದ ಸದಸ್ಯರು ತಮ್ಮ ಅಧಿಕಾರವನ್ನು ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು ನಂತರ ಈ ವರ್ಷದ ಮಂತ್ರಿಮಂಡಲದ ವಿವಿಧ ಖಾತೆಯ ಮಂತ್ರಿಗಳಿಗೆ ಬ್ಯಾಡ್ಜ್‌ಸ್ ಮತ್ತು ಸ್ಯಾಶಸ್ ನೀಡಿ ಅಭಿನಂದಿಸಲಾಯಿತು. ನಂತರ ಮುಖ್ಯಗುರು ರಮೇಶ್ ಮಯ್ಯ ಅವರು ಮಂತ್ರಿಮಂಡಲದ ಎಲ್ಲಾ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಶಾಲೆಯ ಧ್ವಜವನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು. ಕಳೆದ ಶೈಕ್ಷಣಿಕ ವರ್ಷದ ವಿವಿಧ ಸಂಘಗಳ ವರದಿಯನ್ನು ಆಯಾ ಸಂಘಗಳ ಅಧ್ಯಕ್ಷರು ವಾಚಿಸಿದರು.

ವಿದ್ಯಾರ್ಥಿಗಳಿಗೆ ಅಭಿನಂದನೆ:
ಕಳೆದ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕಗಳಿಸಿದ ಶ್ರದ್ಧಾ, ಜೀವಿತ, ಪ್ರೀತಿಕ, ನವ್ಯಶ್ರೀ ಅವರಿಗೆ ಶಾಲಾ ಶಿಕ್ಷಕರು, ಸಿಬ್ಬಂದಿಗಳ ಪರವಾಗಿ ಸ್ಮರಣಿಕೆ ಹಾಗೂ ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು.

ಶ್ರೀ ಲಕ್ಷ್ಮಿನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಗೌಡ ಹಾಗೂ ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ನಯನ ಶುಭಹಾರೈಸಿದರು. ಪ್ರೌಢಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಾರಂತ್ ಸ್ವಾಗತಿಸಿದರು. ತಾರನಾಥ್ ಅತಿಥಿಗಳನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಹೇಮೋದರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜ್ಞಾನ ಶಿಕ್ಷಕಿ ಜಯಲಕ್ಷ್ಮಿ 2024-25ನೇ ಸಾಲಿನ ಸಾಧಕರ ಪಟ್ಟಿಯನ್ನು ವಾಚಿಸಿದರು. ಶಿಕ್ಷಕಿ ಮಂಜುಳಾ ವಂದಿಸಿದರು. ಶಿಕ್ಷಕಿ ಸುಜಾತ ನಿರೂಪಿಸಿದರು.

LEAVE A REPLY

Please enter your comment!
Please enter your name here