ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.22ರಂದು ಸಂಜೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಜು.೨೨ರ ಸಂಜೆ ವೇಳೆಗೆ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ವೇಗದೂತ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅದೇ ಬಸ್ ನಲ್ಲಿದ್ದ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದ.
ಇದರ ಬಗ್ಗೆ ಮಾಹಿತಿ ಪಡೆದ ತಂಡ ಪುತ್ತೂರು ಬಸ್ ನಿಲ್ದಾಣದಲ್ಲಿ ಆತನಿಗಾಗಿ ಕಾದುಕುಳಿತಿದ್ದರು.ವಿಷಯ ತಿಳಿದ ಆರೋಪಿ ಬಸ್ ನಿಂದ ಇಳಿದವನೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಅಂಗಡಿಯೊಂದರಲ್ಲಿ ಅಡಗಿ ಕುಳಿತಿದ್ದ.ಇದನ್ನು ಗಮನಿಸಿದ ತಂಡ ಆತನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅ ವೇಳೆಗಾಗಲೇ ಹಲವು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು.
ಇದರಿಂದಾಗಿ ಸ್ಥಳದಲ್ಲಿ ತುಸು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.ಸ್ಥಳಕ್ಕೆ ಅಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದರು.ತನಿಖೆ ಮುಂದುವರಿದಿದೆ.