ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ನಾಯಕನಾಗಲು ಸಾಧ್ಯ: ಡಾ. ಗೀತಪ್ರಕಾಶ್
ವಿಟ್ಲ: ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ 2025–26ನೇ ಶೈಕ್ಷಣಿಕ ವರ್ಷದ ಇನ್ವೆಸ್ಟಿಚರ್ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಮಂಡಳಿಯ ಸದಸ್ಯ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಭೋಧಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಟ್ಲ ಸುರಕ್ಷಾ ಆಸ್ಪತ್ರೆಯ ವೆದ್ಯರಾದ ಡಾ. ಗೀತಪ್ರಕಾಶ್ ರವರು ಮಾತನಾಡಿ ವಿದ್ಯಾರ್ಥಿಗಳು ನ್ಯಾಯಬದ್ಧತೆ ಮತ್ತು ಸನ್ನಡತೆಯೊಂದಿಗೆ ನಾಯಕತ್ವ ಬೆಳೆಸಿಕೊಂಡರೆ ಭವಿಷ್ಯದಲ್ಲೂ ಉತ್ತಮ ನಾಯಕನಾಗಲು ಸಾಧ್ಯ ಎಂದರು.
ಜಂಯ್ಯತುಲ್ ಫಲಾಹ್ ಬಂಟ್ವಾಳ ಅಧ್ಯಕ್ಷರಾದ ರಶೀದ್ ವಿಟ್ಲ, ಶಾಲಾ ನಿರ್ದೇಶಕರು ನೌಶೀನ್ ಬದ್ರಿಯಾ, ಶಾಲಾ ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್, ಶಾಲಾ ಪ್ರಾಂಶುಪಾಲರಾದ ಲಿಬಿನ್ ಕ್ಸೇವಿಯರ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಅತಿಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಾದ ರಿಮ್ಶಾ ಫಾತಿಮಾ ಮತ್ತು ಮರಿಯಂ ನಿಹಾ ಕಾರ್ಯಕ್ರಮ ನಿರೂಪಿಸಿದರು. ಶಂಝಿ ಫಾತಿಮಾ ಸ್ವಾಗತಿಸಿದರು. ಮೊಹಮ್ಮದ್ ಹಿಷಾಮ್ ವಂದಿಸಿದರು.