ಈಶ್ವರಮಂಗಲ: ರಸ್ತೆಯಲ್ಲೇ ಬೃಹತ್ ಗುಂಡಿ..! – ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಖಚಿತ

0

ಪುತ್ತೂರು: ಈಶ್ವರಮಂಗಲ ಪೇಟೆಯ ಅನತಿ ದೂರದಲ್ಲಿ ರಸ್ತೆಯಲ್ಲೇ ಬೃಹದಾಕಾರದ ಗುಂಡಿಯೊಂದು ನಿರ್ಮಾಣವಾಗಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ಇದೇ ರಸ್ತೆಯಾಗಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು ಯಾವುದೇ ಸಂದರ್ಭದಲ್ಲಿ ಈ ಗುಂಡಿಯಿಂದಾಗಿ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ.


ಹಾಗಾಗಿ ಸಂಬಂಧಪಟ್ಟವರು ಕೂಡಲೇ ಇತ್ತ ಗಮನಹರಿಸಬೇಕು ಎನ್ನುವ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
ಇದು ಪಿಡಬ್ಲ್ಯೂಡಿ ರಸ್ತೆಯಾಗಿದ್ದು, ಕೂಡಲೇ ಇತ್ತ ಗಮನಹರಿಸಿ ಗುಂಡಿಯಿಂದ ಅನಾಹುತ ಸಂಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯ ಎಂದು ನೆ.ಮುಡ್ನೂರು ಗ್ರಾ.ಪಂ ಸದಸ್ಯ ಇಬ್ರಾಹಿಂ ಪಳ್ಳತ್ತೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here