ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕುಂಡಡ್ಕ ನಿವಾಸಿ, ಪಿಕಪ್ ಚಾಲಕ ಚಂದ್ರಹಾಸ ಶೆಟ್ಟಿ ಕೆ.(56ವ.)ರವರು ಅಲ್ಪಕಾಲದ ಅಸೌಖ್ಯದಿಂದ ಜು.23ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಚಂದ್ರಹಾಸ ಶೆಟ್ಟಿಯವರು ಕೆಲ ದಿನದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಆರಂಭದಲ್ಲಿ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು, ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ವರದಿಯಾಗಿದೆ. ಚಂದ್ರಹಾಸ ಶೆಟ್ಟಿಯವರು ಸ್ವಂತ ಪಿಕಪ್ ವಾಹನ ಹೊಂದಿದ್ದು, ನೆಲ್ಯಾಡಿಯಲ್ಲಿ ಬಾಡಿಗೆ ನಡೆಸುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸಹೋದರರಾದ ಯಕ್ಷಗಾನ ಭಾಗವತ ಲಕ್ಷ್ಮೀನಾರಾಯಣ ಶೆಟ್ಟಿ, ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಉಪನ್ಯಾಸಕ ವಿಶ್ವನಾಥ ಶೆಟ್ಟಿಯವರನ್ನು ಅಗಲಿದ್ದಾರೆ.