ಉಪ್ಪಿನಂಗಡಿ: ವಾರಂಟ್ ಆರೋಪಿಯ ಬಂಧನ

0

ಉಪ್ಪಿನಂಗಡಿ: 2021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಮಂಜೇಶ್ವರದ ಯತಿರಾಜ್ (34) ಬಂಧಿತ ಆರೋಪಿ. ಈತ 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಇವನಿಗೆ ಏಳು ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಈತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಯಲ್ಲಿ ಈತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಆರೋಪಿಯು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ ಮತ್ತು ಈತನ ಮೇಲೆ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here