ವಾಣಿಜ್ಯ ಸಂಘದ ಉದ್ಘಾಟನೆ ಹಾಗೂ ಕಂಪನಿ ಸೆಕ್ರೆಟರಿ ( Company Secretary) ಕುರಿತು ಮಾಹಿತಿ ಕಾರ್ಯಾಗಾರ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆಯ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಚಟುವಟಿಕೆಗಳಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ವಿ ರೀಚ್ ಅಕಾಡೆಮಿ, ಉಡುಪಿ ಇದರ ಸಂಸ್ಥಾಪಕರಾದ ಸಂತೋಷ್ ಪ್ರಭು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಕಂಪನಿ ಸೆಕ್ರೆಟರಿ ಕೋರ್ಸ್ ಕುರಿತಾದ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ ಅವರು ವಹಿಸಿದರು. ಕಾರ್ಯಕ್ರಮದಲ್ಲಿ ಶಂಕರ್ ಬಿ, ಆಡಳಿತಾಧಿಕಾರಿಗಳು, ಐಸಿಎಸ್ಐ, ಮಂಗಳೂರು ಚಾಪ್ಟರ್ ಹಾಗೂ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್, ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಉಪಸ್ಥಿತರಿದ್ದರು.‌ ದ್ವಿತೀಯ ಪಿಯುಸಿ  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳುಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗಿಯಾದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ಎ. ಎಂ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕರಾದ ಶ್ರೀಧರ್‌ ಶೆಟ್ಟಿಗಾರ್‌ ವಂದಿಸಿದರು.

LEAVE A REPLY

Please enter your comment!
Please enter your name here