ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ನಲ್ಲಿ ಜನರೇಟರ್’ಗಳ ಮಾಹಿತಿ, ಪ್ರದರ್ಶನ, ಮಾರಾಟ

0

ಅತ್ಯುತ್ತಮ ಗುಣಮಟ್ಟ | ದೀರ್ಘ ಬಾಳಿಕೆ | ಪವರ್ ಬ್ಯಾಕಪ್ | 1 ವರ್ಷದ ವ್ಯಾರಂಟಿ | ಕಡಿಮೆ ಬೆಲೆ

ಪುತ್ತೂರು: ಇಲ್ಲಿನ ಕೊಂಬೆಟ್ಟು ಜಿ.ಎಲ್ ಟ್ರೇಡ್ ಸೆಂಟರ್ ನಲ್ಲಿ ವ್ಯವಹರಿಸುತ್ತಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್’ನಲ್ಲಿ ಜು. 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದ್ದು ಇದರ ಉದ್ಘಾಟನೆಯು ಜು.24 ರಂದು‌ ಮಳಿಗೆಯಲ್ಲಿ ನೆರವೇರಿತು.ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಪುತ್ತೂರಿನಲ್ಲಿ ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಸಂಸ್ಥೆಯು ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ಸಲ್ಲಿಸುವ ಮೂಲಕ ಹೆಸರು ಗಳಿಸಿದೆ. ಯಾವುದೇ ಉದ್ಯಮ ಇರಲಿ, ಬೇಡಿಕೆಗೆ ತಕ್ಕಂತೆ ಪೂರೈಕೆಯ ವ್ಯವಸ್ಥೆ ಸಂಸ್ಥೆ ಬೆಳವಣಿಗೆ ಹೊಂದಲು ಸಾದ್ಯವಾಗುತ್ತದೆ. ಪುತ್ತೂರಿನ ಜನರು ಇದರ ಉಪಯೋಗ ಪಡೆಯುವಂತಾಗಲಿ, ಸಂಸ್ಥೆಯ ಆಶಯ ಈಡೇರುವಂತಾಗಲಿ ಎಂದು ಹೇಳಿ ಶುಭ ಹಾರೈಸಿದರು.


ಗೌರವಾರ್ಪಣೆ:
ಇತ್ತೀಚೆಗೆ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿರುವ ಜೊತೆಗೆ ಪ್ರತಿಯೊಬ್ಬರ ಮನಸ್ಸನ್ನು ಗೆದ್ದಂತಹ ಪುತ್ತೂರಿನ ಕಲಾವಿದರೇ ನಿರ್ಮಿಸಿ, ನಟಿಸಿರುವ ತುಳು ಚಲನಚಿತ್ರ “ಧರ್ಮ ಚಾವಡಿ”ಯಲ್ಲಿ ನಾಯಕ ನಟಿಯ ಸ್ನೇಹಿತನ ಪಾತ್ರ ಮಾಡಿ ಪ್ರಶಂಸೆಗೆ ಪಾತ್ರರಾದ ಶರತ್ ಆಳ್ವ ಕೂರೇಲು, ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದು ಚಿತ್ರದಲ್ಲಿ ಪ್ರಬುದ್ಧ ಅಭಿನಯದಿಂದ ಮನ ಗೆದ್ದಿರುವ ಯತೀಶ್ ರವರುಗಳನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ ಗೌರವಾರ್ಪಣೆ ಸಲ್ಲಿಸಲಾಯಿತು.


ಅಮೆರ್ ಎನ್.ಎಸ್.ಎಂ. ಇಂಡಿಯಾದ ರೀಜನಲ್ ಸೇಲ್ಸ್ ಮ್ಯಾನೇಜರ್ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್, ಜೇಸಿಐ ಸದಸ್ಯ ಹಾಗೂ ಕೃಷಿ ಏಜೆನ್ಸೀಸ್ ನ ಸದಾಶಿವ ರೈ, ಸಂಸ್ಥೆಯ ಪಾಲುದಾರೆ ಶ್ರೀಮತಿ ಅನ್ನಪೂರ್ಣ ಶರ್ಮರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕ ಪಶುಪತಿ ಶರ್ಮಾರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.


ವಿವಿಧ ವಿನ್ಯಾಸದ ಜನರೇಟರ್ ಲಭ್ಯ..
ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಸಂಸ್ಥೆಯಲ್ಲಿ ಲಭ್ಯವಾಗಲಿದೆ. ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನ ಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.
-ಪಶುಪತಿ ಶರ್ಮ, ಮಾಲಕರು, ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್

ಜು.24-31:ಆಯೋಜನೆ..
ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ. ಈ ಯೋಜನೆಯು ಜು.24 ರಿಂದ 31ರ ವರೆಗೆ ಇದ್ದು ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳುವಂತಾಗಲಿ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here