ಶಿಕ್ಷಣದಲ್ಲಿ ಬುನಾದಿ ಭದ್ರವಾದರೆ ಯಾವ ಸಾಧನೆಯೂ ಅಸಾಧ್ಯವಲ್ಲ- ನವೀನ್ ಭಂಡಾರಿ
ಬೆಟ್ಟಂಪಾಡಿ: ಇಲ್ಲಿನ ವಿದ್ಯಾಗಿರಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 2025- 26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಜು. 18 ರಂದು ಜರಗಿತು.
ಪುತ್ತೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ಮಾತನಾಡಿ, ಗ್ರಾಮೀಣ ಶಿಕ್ಷಣ ಸಂಸ್ಥೆಯಲ್ಲಿ ಈ ರೀತಿ ಗುಣಮಟ್ಟದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಭಾಗ್ಯವಂತರು. ಶಿಕ್ಷಣದಲ್ಲಿ ಬುನಾದಿ ಭದ್ರವಾದರೆ ಯಾವ ಸಾಧನೆಯೂ ಅಸಾಧ್ಯವಲ್ಲ. ಪ್ರಾಮಾಣಿಕತೆ ಹಾಗೂ ಆತ್ಮವಿಶ್ವಾಸವಿದ್ದಲ್ಲಿ ಯಶಸ್ಸು ಸಾಧ್ಯ ಎಂದರು.
ಮುಖ್ಯಗುರು ರಾಜೇಶ್ ನೆಲ್ಲಿತಡ್ಕ ಪ್ರಮಾಣವಚನ ಬೋಧಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ರಾಜ್ಯ ಸರಕಾರ ಕೇಂದ್ರ ಸರಕಾರಗಳ ಮಂತ್ರಿ ಮಂಡಲದ ಪ್ರಮಾಣವಚನದ ಮಾದರಿಯ ವಸ್ತ್ರ ಸಂಹಿತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ರೈ ಬೈಲಾಡಿ, ಶಾಲಾ ನಾಯಕಿ ಶಾವ್ಯ ಯು.ರೈ, ಕಾರ್ಯದರ್ಶಿ ಸಿಂಚನ್ ರೈ, ಉಪಸ್ಥಿತರಿದ್ದರು. ಸಹ ಶಿಕ್ಷಕಿ ಭವ್ಯ ಸ್ವಾಗತಿಸಿ, ವಿದ್ಯಾರ್ಥಿ ವೃದ್ಧಿ ಸಿ. ವಂದಿಸಿದರು. ವಿದ್ಯಾರ್ಥಿನಿ ಧನ್ವಿ ರೈ ಕೋಟೆ ಕಾರ್ಯಕ್ರಮ ನಿರೂಪಿಸಿದರು.