ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದ ಎ.ವಿ.ಜಿ ಆಂಗ್ಲ ಮಾಧ್ಯಮ ಶಾಲೆಯ ಮತ್ತು ಕೆ.ವಿ.ಜಿ ಮೆಡಿಕಲ್ ಕಾಲೇಜು, ಆಸ್ಪತ್ರೆ, ಕುರುಂಜಿಬಾಗ್ ಸುಳ್ಯ ಹಾಗು ಕೆ.ವಿ.ಜಿ ಆಯುರ್ವೇದಿಕ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜು.27ರಂದು ಬೃಹತ್ ವೈದ್ಯಕೀಯ ಶಿಬಿರವು ಬನ್ನೂರು ಕೃಷ್ಣನಗರದ ಬಳಿಯ ಎ.ವಿ.ಜಿ. ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 9ಕ್ಕೆ ಶಿಬಿರದ ಉದ್ಘಾಟನೆ ನಡೆಯಲಿದೆ. ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಎಂ.ಡಿ. ಎ.ಒ.ಎಲ್.ಇ ಇದರ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಎ.ವಿ.ಜಿ. ಅಸೋಸಿಯೇಟ್ಸ್ನ ಮಾಲಕ ಎ.ವಿ.ನಾರಾಯಣ, ನಗರಸಭೆ ಸದಸ್ಯೆ ಗೌರಿ ಬನ್ನೂರು, ಬನ್ನೂರು ಗ್ರಾ.ಪಂ ಅಧ್ಯಕ್ಷೆ ಸ್ಮಿತಾ ಎನ್, ಚಿಕ್ಕಮುಡ್ನೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲದ ಅಧ್ಯಕ್ಷ ದಯಾನಂದ ಗೌಡ, ಬನ್ನೂರು ಸ್ಪೂರ್ತಿ ಯುವಕ ಮಂಡಲದ ಸಂಚಾಲಕ ದಿನೇಶ್ ಸಾಲಿಯಾನ್, ಕೃಷ್ಣನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಉದಯ ಕುಮಾರ್, ಆನೆಮಜಲು ಪ್ರೆಂಡ್ಸ್ ಸೇವಾ ಸಮಿತಿ ಅಧ್ಯಕ್ಷ ಲೋಕೇಶ್, ಎ.ವಿ.ಜಿ. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸೌಮ್ಯಶ್ರೀ ಹೆಗ್ಡೆ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಲ್ಲಿರುವರು.
ಶಿಬಿರದಲ್ಲಿ ದೊರಕುವ ಸೌಲಭ್ಯಗಳು:
ಜನರಲ್ ಮೆಡಿಸಿನ್, ಶಸ್ತ್ರಚಿಕಿತ್ಸೆ ವಿಭಾಗ, ಹೆರಿಗೆ ಮತ್ತು ಸ್ತ್ರೀರೋಗ ವಿಭಾಗ, ಎಲುಬು ಮತ್ತು ಕೀಲುರೋಗ, ಕಿವಿ, ಮೂಗು, ಗಂಟಲು, ಮಕ್ಕಳ ಮತ್ತು ನೇತ್ರಾ ಚಿಕಿತ್ಸಾ ವಿಭಾಗಗಳು, ಚರ್ಮ ಮತ್ತು ಲೈಂಗಿಕ ರೋಗ, ಮನೋರೋಗ, ಶ್ವಾಸಕೋಶ, ಆಯುರ್ವೇದ ಚಿಕಿತ್ಸಾ ವಿಭಾಗವಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448485983, 7338085983 ಅನ್ನು ಸಂಪರ್ಕಿಸುವಂತೆ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ಪ್ರಕಟಣೆ ತಿಳಿಸಿದೆ.
ವಿಶೇಷ ಸೌಲಭ್ಯ:
ಇಸಿಜಿ, ಬಿ.ಪಿ, ಶುಗರ್ ತಪಾಸಣೆಯಿದೆ. ಕಣ್ಣಿನ ಶಸ್ತ್ರಚಿಕಿತ್ಸೆಯಿದ್ದು ಅದಕ್ಕಾಗಿ ತಮ್ಮ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು ಎಂದು ಸಂಘಟಕರು ತಿಳಿಸಿದ್ದಾರೆ.