ಪುತ್ತೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಒಕ್ಕಲಿಗ ಗೌಡ ಮಹಿಳಾ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆಟಿ ಹಬ್ಬ ಕಾರ್ಯಕ್ರಮ ಜು. 27ರಂದು ನಡೆಯಲಿದೆ.
ಮಧ್ಯಾಹ್ನ ಗಂಟೆ ೧೨ಕ್ಕೆ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಬಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರು ಮತ್ತು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ ಪಿ.ಆರ್ ನಿಡ್ಪಳ್ಳಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಕೆ ಗೌಡ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ, ಒಕ್ಕಲಿಗ ಸ್ವಸಹಾಯ ಸಂಘದ ಅಧ್ಯಕ್ಷ ಮನೋಹರ್ ಡಿ.ವಿ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ಗಂಟೆ ೩ಕ್ಕೆ ಸಮಾರೋಪ ಸಮಾರಂಭದಲ್ಲಿ ಸನ್ಮಾನ ಮತ್ತು ಬಹುಮಾನ ವಿತರಣೆ ನಡೆಯಲಿದೆ. ಬೆಳಗ್ಗೆ ಹೊನ್ನಮ್ಮ ಬಾಬು ಗೌಡ ಬೇರಿಕೆ ಆಟಿ ಹಬ್ಬದ ವಿವಿಧ ಆಟೋಟ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಕೆ ಗೌಡ ತಿಳಿಸಿದ್ದಾರೆ.