ಹಿರಿಯರ ದಾರಿಯಲ್ಲಿ ಮುಂದುವರೆಯೋಣ: ಡಾ. ಪ್ರಶಾಂತ್ ಮಾರ್ಲ
ವಿಟ್ಲ: ವಿದ್ಯಾವಂತರಾಗಿ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡ ಮಕ್ಕಳು ಉದ್ಯೋಗದಿಂದಾಗಿ ಎಷ್ಟು ದೂರ ಹೋದರು, ನಮ್ಮೂರಿನ ಸಂಸ್ಕೃತಿಯನ್ನು ಮರೆಯಬಾರದು. ಹಿರಿಯರು ತೋರಿಸಿಕೊಟ್ಟ ದಾರಿಯಲ್ಲಿ ಉತ್ತಮ ಹೆಜ್ಜೆಯೊಂದಿಗೆ ಮುನ್ನಡೆಯಬೇಕು ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ಹೇಳಿದರು.
ಮಾಣಿ ವಲಯ ಬಂಟರ ಸಂಘದ ವತಿಯಿಂದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರುಗಿದ ಆಟಿಡೊಂಜಿ ಕೂಟ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆ, ಶಿಕ್ಷಕಿ ವಿಜಯಾ.ಬಿ.ಶೆಟ್ಟಿ ಸಾಲೆತ್ತೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಆಟಿ ತಿಂಗಳ ವೈಶಿಷ್ಟ್ಯತೆಗಳ ಬಗ್ಗೆ ತಿಳಿಸಿದರು. ಮಾಣಿ ವಲಯ ಬಂಟರ ಸಂಘದ ಅಧ್ಯಕ್ಷ ಮಾಧವ ರೈ ಅಮೈ ಭಂಡಸಾಲೆ ಸಭಾಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಬಂಟರ ಸಂಘದ ಸ್ಥಾಪಕಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಪ್ರಹ್ಲಾದ ಶೆಟ್ಟಿ ಜಡ್ತಿಲ, ಬಂಟ್ವಾಳ ತಾಲೂಕು ಬಂಟರ ಸಂಘದ ಮಾಜಿ ಉಪಾಧ್ಯಕ್ಷೆ ಪ್ರಫುಲ್ಲ.ಆರ್.ರೈ ಕಲ್ಲಾಜೆಗುತ್ತು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗನ್ನಾಥ ಚೌಟ ಬದಿಗುಡ್ಡೆರವರನ್ನು ಅಭಿನಂದಿಸಲಾಯಿತು.

ಪ್ರಗತಿಪರ ಕೃಷಿಕರಾದ ರಾಜೀವಿ.ಎಸ್.ಶೆಟ್ಟಿ, ಸಮಾಜ ಸೇವಕ ಜಯರಾಮ ರೈ ಪಾಚುಕೋಡಿ, ನಿವೃತ್ತ ಶಿಕ್ಷಕಿ ಸುಲೋಚನ.ಡಿ.ಶೆಟ್ಟಿ ಮತ್ತು ಆಯುರ್ವೇದ ವೈದ್ಯರಾದ ಡಾ.ಹರಿಪ್ರಸಾದ್ ಶೆಟ್ಟಿರವರುಗಳನ್ನು ಸನ್ಮಾನಿಸಲಾಯಿತು. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಲಯದ ನೂತನ ವಧೂವರರನ್ನು ಅಭಿನಂದಿಸಲಾಯಿತು. ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ತಯಾರಿಸಿದ ಮಹಿಳೆಯರನ್ನು ಗುರುತಿಸಲಾಯಿತು. ವಲಯದ ಬಂಟ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಸಪ್ರಶ್ನೆ ಕಾರ್ಯಕ್ರಮ ವಿಶಿಷ್ಟ ರೀತಿಯಲ್ಲಿ ಜರುಗಿತು. ಸಂಘದ ಪೂರ್ವಾಧ್ಯಕ್ಷ ಪ್ರವೀಣ್ ರೈ ಕಲ್ಲಾಜೆ, ನಿಕಟಪೂರ್ವಾಧ್ಯಕ್ಷ ಗಂಗಾಧರ ರೈ ವಡ್ಯದಗಯ, ಗೌರವ ಸಲಹೆಗಾರರಾದ ಗಂಗಾಧರ ರೈ ತುಂಗೆರೆಕೋಡಿ, ಉಪಾಧ್ಯಕ್ಷೆ ವಿಜಯಲಕ್ಷ್ಮಿ.ವಿ.ಶೆಟ್ಟಿ, ಕೋಶಾಧಿಕಾರಿ ಸುಧಾಕರ ಶೆಟ್ಟಿ ವಾರಾಟ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಹರೀಶ್ ಆಳ್ವ ಮಾದೇಲು, ಸಂಘಟನಾ ಕಾರ್ಯದರ್ಶಿ ಚೇತನ್ ಶೆಟ್ಟಿ ಕರಿಂಕ, ಜೊತೆ ಕಾರ್ಯದರ್ಶಿ ಶರ್ಮಿಳಾ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಕಸ್ತೂರಿ.ಪಿ.ಶೆಟ್ಟಿ, ಯುವ ವಿಭಾಗದ ಸಂಚಾಲಕ ವಿನಿತ್ ಶೆಟ್ಟಿ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಗಂಗಾಧರ ಆಳ್ವ ಅನಂತಾಡಿ ಸ್ವಾಗತಿಸಿದರು, ಕಾರ್ಯದರ್ಶಿ ನಿರಂಜನ್ ರೈ ಕುರ್ಲೆತ್ತಿಮಾರು ವಂದಿಸಿದರು, ಪೂರ್ವಾಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ವಿಂದ್ಯಾ.ಎಸ್.ರೈ ಕಾರ್ಯಕ್ರಮ ನಿರೂಪಿಸಿದರು.