ದ.ಕ. ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ (ಜು.25) ರಜೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಡೆಬಿಡದೆ ನಿರಂತರ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜು.25) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ, ನೀರು ಇರುವ ತಗ್ಗು ಪ್ರದೇಶ, ಕರೆ, ನದಿತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಪ್ರವಾಸಿಗರು, ಸಾರ್ವಜನಿಕರು ಕೂಡ ನದಿ ಮತ್ತು ಸಮುದ್ರ ತೀರಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದ್ದು, ನೋಡಲ್ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧರಾಗಿರಬೇಕು ಎಂದು ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here