ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.26ರಂದು ಬೆಳಗ್ಗೆ 9.15 ಗಂಟೆಗೆ ಕಿಲ್ಲೆ ಮೈದಾನದ ಎದುರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಕೆ.ನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಯುವ ವಾಗ್ಮಿ ಶ್ರೀದೇವಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜಿ.ಎಲ್.ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
