ಪುತ್ತೂರು: ಸಂಘಟನೆ, ಹೋರಾಟ, ಶಿಕ್ಷಣವನ್ನು ಉದ್ದೇಶವಾಗಿಟ್ಟುಕೊಂಡಿರುವ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ, ತಾಲೂಕು ಘಟಕ ಮತ್ತು ಯುವವೇದಿಕೆ ಪುತ್ತೂರು ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು.27ರಂದು ಪುತ್ತೂರು ಕೊಂಬೆಟ್ಟಿನ ಬಂಟರ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಬಾಬು ಮರಿಕೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಮೋಹನ್ ನೆಲ್ಲಿಗುಂಡಿ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಾವು ಮಾರಿಯಮ್ಮ ದೇವಸ್ಥಾನದ ಧರ್ಮದರ್ಶಿ ಚಂದ್ರ ಬಿ.ಸಿ ಉಪಸ್ಥಿತಿಯಲ್ಲಿರುವವರು. ಬೆಳಿಗ್ಗೆ ಗಂಟೆ 11ಕ್ಕೆ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಗಾಕ್ಷ ಗಣೇಶ್ ಪ್ರಸಾದ್, ಗೌರವಾಧ್ಯಕ್ಷ ಶಿವಾನಂದ ಬಳ್ಳಾಲ್ ಬಾಗ್, ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ, ಮಾಜಿ ಶಾಸಕ ಸಂಜೀವ ಮಠಂದೂರು, ಆದಿದ್ರಾವಿಡ ಮುಖಂಡ ರಾಜ ಚೆಂಡ್ತಿಮಾರ್, ಸಂಪ್ಯ ಪೊಲೀಸ್ ಠಾಣೆ ಸಿಬ್ಬಂದಿ ವೆಂಕಪ್ಪ, ಆದಿ ದ್ರಾವಿಡ ಯುವ ವೇದಿಕೆ ಪುತ್ತೂರು ಇದರ ಅಧ್ಯಕ್ಷ ಮಹೇಶ್ ಮರಿಕೆ, ಗೌರವಾಧ್ಯಕ್ಷ ಸುರೇಶ್ ಪಿ ಗುಂಡ್ಯ, ಸಾಂತಪ್ಪ ಪೂಜಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ ಅವರು 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು ಎಂದರು. ಗೌರವಾಧ್ಯಕ್ಷ ಸುರೇಶ್ ಪಿ ಸಂಪ್ಯ, ಸಾಂತಪ್ಪ ಸಂಜಕಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಮಾಜಬಾಂವರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು. ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜಸೇವಾ ಸಂಘದ ಗೌರವಾಧ್ಯಕ್ಷ ಸೋಮನಾಥ ಉಪ್ಪಿನಂಗಡಿ, ಗೌರವ ಸಲಹೆಗಾರ ಬಿ.ಕೆ.ಅಣ್ಣಪ್ಪ ಕಾರೆಕಾಡು, ಪುತ್ತೂರು ಘಟಕದ ಗೌರವಾಧ್ಯಕ್ಷ ಲೋಹಿತ್ ಅಮ್ಚಿನಡ್ಕ, ಉಪಾಧ್ಯಕ್ಷ ಜಯ ಕಾರೆಕಾಡು ಉಪಸ್ಥಿತರಿದ್ದರು.
ವಿವಿಧ ಬೇಡಿಕೆಗೆ ಆಗ್ರಹಿಸಿ ಶಾಸಕರಿಗೆ ಮನವಿ
ರಾಜಕೀಯವಾಗಿ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಆದಿದ್ರಾವಿಡ ಸಮುದಾಯ ಭವನ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಅಗಬೇಕು. ನಮ್ಮ ಸಮುದಾಯದ ಬಹಳಷ್ಟು ಮಂದಿಯ ಜಮೀನಿನ ಮೇಲೆ ಸರಿಯಾದ ದಾಖಲೆಯಿಲ್ಲ. ಇದನ್ನು ಸರಿ ಮಾಡಿಕೊಡುವಂತೆ ಶಾಸಕರಿಗೆ ಮನವಿ ಮಾಡಲಾಗುವುದು.
ಬಾಬು ಮರಿಕೆ
ಅಧ್ಯಕ್ಷರು ಆದಿದ್ರಾವಿಡ ಸಂಘ