ಕಳವು ಪ್ರಕರಣ:ವಾರಂಟ್ ಆರೋಪಿ ಬಂಧನ

0

ಪುತ್ತೂರು: ಕಳವು ಪ್ರಕರಣಕ್ಕೆ ಸಂಬಂಧಿಸಿ ಕಳೆದ 5 ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


2017ರಲ್ಲಿ ಕಳವು ಪ್ರಕರಣಕ್ಕೆ ಸಂಬಂಽಸಿ ಹಾಸನದ ಬೇಲೂರು ನಿವಾಸಿ ರಿಯಾಜ್ (33ವ)ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಯು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ಆರೋಪಿಯ ವಿರುದ್ದ ವಾರಂಟ್ ಜಾರಿ ಮಾಡಿತ್ತು.ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಕೌಶಿಕ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪ್ರಶಾಂತ್ ರೈ, ಶ್ರೀಶೈಲ, ಮಹಮ್ಮದ್ ಮೌಲಾನ ಅವರು ಆರೋಪಿಯನ್ನು ಹಾಸನದ ಬೇಲೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here